ಬಳ್ಳಾರಿ: ಪ್ರಾಣ ಹೋದರೂ ಸರಿಯೇ ರಾಜವಾಳ ಗ್ರಾಮದಲ್ಲಿ ಜಾಕ್​ ವಾಲ್​ ನಿರ್ಮಾಣ ಮಾಡುತ್ತೇನೆ ಎಂದು ಶಾಸಕ ಭೀಮಾ ನಾಯಕ್​ ಗ್ರಾಮಸ್ಥರಿಗೆ ಹೇಳಿದ್ದಾರೆ.
ಹಗರಿಬೊಮ್ಮನಹಳ್ಳಿ ಜನರಿಗೆ ಕುಡಿಯುವ ನೀರಿನ ಯೊಜನೆ ಜಾರಿಗೆ ತರಲು ಮಾಲವಿ ಜಲಾಶಯಕ್ಕೆ ಜಾಕ್​ವಾಲ್​ ನಿರ್ಮಿಸುವ ವಿಚಾರದಲ್ಲಿ ಹೂವಿನ ಹಡಗಲಿ ತಾಲೂಕಿನ ರಾಜವಾಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಜಾಕ್​ ವಾಲ್​ ನಿರ್ಮಾಣ ಮಾಡಿಯೇ ತೀರುತ್ತೇನೆ ಎಂದು ಹೇಳಿದರು.
ಕಾಮಗಾರಿ ನಡೆಯುವ ಸ್ಥಳದಲ್ಲಿ ರುದ್ರಭೂಮಿ ಇರುವುದರಿಂದ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಬೇರೆ ಜಾಗದಲ್ಲಿ ನಿರ್ಮಿಸುವಂತೆ ಕೋರಿದರು.
ಈ ಯೋಜನೆ ನನ್ನ ಕ್ಷೇತ್ರದ ಅಳಿವು-ಉಳಿವು ಪ್ರಶ್ನೆಯಾಗಿದೆ. ಯೋಜನೆ ಜಾರಿಯಾದರೆ ಅಂತರ್ಜಲ ಮಟ್ಟ ಹೆಚ್ಚುತ್ತದೆ. ಲಕ್ಷ ಮಂದಿಗೆ ಶುದ್ಧ ಕುಡಿಯುವ ನೀರು ದೊರೆಯುತ್ತದೆ. ಹೀಗಾಗಿ ಯೋಜನೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಅಡ್ಡಿಪಡಿಸಬೇಡಿ ಎಂದು ಗ್ರಾಮಸ್ಥರಿಗೆ ಅವರು ಮನವಿ ಮಾಡಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 12 =
Remember me
