ಬೆಂಗಳೂರು:ಕನ್ನಡ ರಾಜ್ಯೋತ್ಸವದಂದು ರಾಜ್ಯ ಸರ್ಕಾರದ ವತಿಯಿಂದ ಡಾ.ಪುನೀತ್​​ ರಾಜ್​ಕುಮಾರ್​​ ಅವರಿಗೆ ಮರಣೋತ್ತರವಾಗಿ ರಾಜ್ಯದ ಪ್ರತಿಷ್ಠಿತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವ ಸಲುವಾಗಿ ಮಂಗಳವಾರ (ನ.1) ತಮಿಳು ನಟ ಸೂಪರ್​ಸ್ಟಾರ್​​ ರಜನಿಕಾಂತ್​ ಅವರು ತಮ್ಮ ಮಗಳ ಜತೆಯಲ್ಲಿ ಬೆಂಗಳೂರಿಗೆ ಆಗಮಿಸಿದರು.
ನಗರದ ಹೆಚ್.ಎ.ಎಲ್‌ಗೆ‌ ಆಗಮಿಸಿದ ರಜನಿಕಾಂತ್​ ಅವರನ್ನು ಬಿಜೆಪಿ ಸಚಿವ ಮುನಿರತ್ನ ಹೂಗುಚ್ಛ ನೀಡುವ ಮೂಲಕ ಬರಮಾಡಿಕೊಂಡರು. ಈ ವೇಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಸಾಥ್​​ ನೀಡಿದರು. ರಜನಿಕಾಂತ್​​ ಅವರ ಜತೆಯಲ್ಲಿ, ಮಗಳು ಐಶ್ವರ್ಯಾ ರಜನಿಕಾಂತ್​ ಕೂಡ ಆಗಮಿಸಿದರು.
ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ತಯಾರಿಗಳು ನಡೆಯುತ್ತಿವೆ. ರಾಜ್ಯದ ಗಣ್ಯರು, ಸೇರಿದಂತೆ ಹಲವಾರು ಪ್ರಮುಖರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಪುನೀತ್​​ ಕುಟುಂಬದಿಂದ 50 ಜನ ಭಾಗಿಯಾಗುತ್ತಿದ್ದು, ಅವರಿಗೆಲ್ಲಾ ರಾಜ್ಯ ಸರ್ಕಾರ ವಿಶೇಷ ಪಾಸ್​ಗಳನ್ನು ನೀಡಿದೆ. ತೆಲುಗು ನಟ ಜೂನಿಯರ್​​ ಎನ್​ಟಿಆರ್​​, ಗೆಳೆಯನಿಗೆ ಸಿಗುವ ಕರ್ನಾಟಕ ರತ್ನ ಪ್ರಶಸ್ತಿಗೆ ಸಾಕ್ಷಿಯಾಗುವುದಕ್ಕಾಗಿ ಒಂದು ದಿನ ಮುಂಚಿತವಾಗಿಯೇ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × one =
Remember me
