ಬೆಂಗಳೂರು:ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಬಿಜೆಪಿಯಿಂದ ಹಲವು ಹೆಸರು ಪರಿಶೀಲನೆಯಲ್ಲಿದ್ದು, ಪಕ್ಷದ ವರಿಷ್ಠರು ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ಒಂದು ಸ್ಥಾನಕ್ಕೆ ಉಪ ಚುನಾವಣೆ ಡಿ.1ರಂದು ನಡೆಯಲಿದೆ. ವಿಧಾನಸಭೆಯಲ್ಲಿನ ಸಂಖ್ಯಾಬಲದಿಂದ ಈ ಸ್ಥಾನ ಸುಲಭವಾಗಿ ಬಿಜೆಪಿ ಪಾಲಾಗಲಿದೆ. ಹಾಗಾಗಿ ಪಕ್ಷದಲ್ಲಿ ಪೈಪೋಟಿ ಹೆಚ್ಚಾಗಿದೆ.
4 ಸ್ಥಾನಗಳಿಗೆ ಚುನಾವಣೆ ನಡೆದ ಸಂದರ್ಭ ಅಚ್ಚರಿ ಅಭ್ಯರ್ಥಿಗಳನ್ನು ವರಿಷ್ಠರು ಆಯ್ಕೆ ಮಾಡಿದ್ದರು. ಈ ಬಾರಿಯೂ ಅಂಥದ್ದೆ ಅಚ್ಚರಿ ಆಯ್ಕೆ ನಿರೀಕ್ಷೆ ನಡುವೆಯೂ ಹಲವು ಹೆಸರು ಚರ್ಚೆಗೆ ಬಂದಿವೆ. ಹೊರ ರಾಜ್ಯದವರನ್ನು ಕರೆತಂದು ಮಣೆ ಹಾಕುವುದು ಹೊಸದೇನು ಅಲ್ಲ. ಈ ಬಾರಿಯೂ ಹೊರ ರಾಜ್ಯದವರನ್ನೇ ಕರೆ ತರುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗುತ್ತಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ
ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿರುವ ರಜನಿಕಾಂತ್ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಚರ್ಚೆಯಾಗುತ್ತದೆ. ತಮಿಳುನಾಡಿನಲ್ಲಿ ಕಮಲ ಅರಳಿಸುವ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿರುವ ಪಕ್ಷದ ಮುಖಂಡರು ಆ ಕಾರ್ಯವನ್ನು ರಜನಿಕಾಂತ್ ಮೂಲಕ ಮಾಡಿಸುವ ಉದ್ದೇಶ ಹೊಂದಿದ್ದಾರೆ. ಬಿಜೆಪಿ ಪ್ರಯತ್ನಕ್ಕೆ ರಜನಿಕಾಂತ್ ಇನ್ನೂ ಸಮ್ಮತಿಸಿಲ್ಲ ಎನ್ನಲಾಗಿದೆ. ರಜನಿಕಾಂತ್ ಒಪ್ಪದಿದ್ದಲ್ಲಿ ಇತ್ತೀಚೆಗೆ ಬಿಜೆಪಿ ಸೇರಿರುವ ನಟಿ ಖುಷ್ಬೂರನ್ನು ಆಯ್ಕೆ ಮಾಡಬಹುದೆಂದು ಚರ್ಚೆಯಾಗಿದೆ. ಕನ್ನಡ ಚಿತ್ರಗಳಲ್ಲಿ ನಟಿಸಿರುವ ಖುಷ್ಬೂ ಅವರಿಗೆ ರಾಜ್ಯ ದಲ್ಲಿಯೂ ಅಭಿಮಾನಿಗಳಿದ್ದು, ಪಕ್ಷಕ್ಕೆ ಅನುಕೂಲವಾಗುತ್ತದೆ ಎನ್ನಲಾಗುತ್ತಿದೆ. ಇತ್ತೀಚಿಗೆ ಬಿಜೆಪಿ ಸೇರಿರುವ ಐಪಿಎಸ್ ಮಾಜಿ ಅಧಿಕಾರಿ ಅಣ್ಣಾಮಲೈ ಹೆಸರನ್ನೂ ಪರಿಶೀಲನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಅಶೋಕ್ ಗಸ್ತಿ ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ವರ್ಗಗಳ ಮುಖಂಡರಾಗಿದ್ದರು. ಈ ಭಾಗದಲ್ಲಿ ಹಿಂದುಳಿದ ವರ್ಗಗಳು ನಿರ್ಣಾಯಕ ಸ್ಥಾನದಲ್ಲಿರುವ ಕಾರಣ ಇದೇ ಭಾಗಕ್ಕೆ ಸೇರಿದವರನ್ನು ಆಯ್ಕೆ ಮಾಡಬೇಕೆಂಬ ಒತ್ತಡ ಪಕ್ಷದಲ್ಲಿದೆ. ಗಸ್ತಿ ಪತ್ನಿ ಸಹ ಅದೇ ಅಭಿಪ್ರಾಯವನ್ನೇ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − twelve =
Remember me
