ಬೆಂಗಳೂರು:ಮುಜರಾಯಿ ಇಲಾಖೆ ದೇಗುಲಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ಸರತಿ ಸಾಲಿನಲ್ಲಿ ನಿಲ್ಲದೆ ನೇರ ದರ್ಶನಕ್ಕೆ ಅವಕಾಶ ನೀಡುವುದು, ಮೈಸೂರು ಶ್ರೀ ಚಾಮುಂಡೇಶ್ವರಿ ಬೆಟ್ಟಕ್ಕೆ ಪ್ರಾಧಿಕಾರ ರಚಿಸುವುದು, ದೇವಸ್ಥಾನಗಳಲ್ಲಿ ಮೊಬೈಲ್ ೆನ್ ಬಳಕೆಯನ್ನು ನಿಷೇಧಿಸುವುದು ಸೇರಿ ರಾಜ್ಯ ಧಾರ್ಮಿಕ ಇಲಾಖೆ ಹಲವು ತೀರ್ಮಾನಗಳನ್ನು ತೆಗೆದುಕೊಂಡಿದೆ.
ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರೂ, ಹಿಂದೂ ಧಾರ್ಮಿಕ ದತ್ತಿ ಸಚಿವರೂ ಅದ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ ಪ್ರಪ್ರಥಮ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಇದೇ ವೇಳೆ, ಕಾಶಿ ಯಾತ್ರೆಯಲ್ಲಿ ಹೊಸದಾಗಿ ಗಯಾವನ್ನು ಸೇರ್ಪಡೆಗೊಳಿಸಲಾಗಿದೆ. ಪ್ರಸ್ತುತ ಇದ್ದ 5 ಸಾವಿರ ರೂ. ಸಹಾಯ ಧನವನ್ನು 7,500 ರೂ.ಗೆ ಹೆಚ್ಚಿಸಲಾಗಿದೆ. ಜತೆಗೆ ಊಟ, ತಿಂಡಿಗಾಗಿ ಪ್ರತ್ಯೇಕ ವ್ಯವಸ್ಥೆ, ವೈದ್ಯರ ಸೇವೆಗಾಗಿ ಪ್ರತ್ಯೇಕ ಭೋಗಿ ಕಲ್ಪಿಸಲಾಗಿದೆ.
2 ಲಕ್ಷ ರೂ. ಪರಿಹಾರ:ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿ ದೇವಾಲಯ ಅಥವಾ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ ಹಾಗೂ ನೌಕರರು ಮೃತಪಟ್ಟಲ್ಲಿ 2 ಲಕ್ಷ ರೂಪಾಯಿ ಪರಿಹಾರ ನೀಡುವ ಯೋಜನೆಗೆ ಸಮ್ಮತಿಸಿದ ಧಾರ್ಮಿಕ ಪರಿಷತ್ತು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ ‘ಬಿ’ ಮತ್ತು ‘ಸಿ’ ಅಧಿಸೂಚಿತ ದೇವಾಲಯ ಅಥವಾ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಾರ್ಷಿಕ ಪ್ರೋತ್ಸಾಹ ಧನ ವಿತರಿಸಲು ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಅರ್ಚಕರಿಗೆ ಆರೋಗ್ಯ ಕಾರ್ಡ್:ಇಲಾಖೆ ವ್ಯಾಪ್ತಿಯ ದೇವಾಲಯ/ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅರ್ಚಕರು, ನೌಕರರಿಗೆ ಜಿಲ್ಲಾ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ಕಾರ್ಡ್ ವಿತರಿಸಲಾಗುವುದು. ಇದಕ್ಕೆ ಅಗತ್ಯವಿರುವ ನೋಂದಣಿ ಶುಲ್ಕ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸುವುದಾಗಿ ಹೇಳಿದರು.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ:ಅರ್ಚಕರ ಹಾಗೂ ನೌಕರರ ಮಕ್ಕಳ ಶಿಕ್ಷಣಕ್ಕಾಗಿ ವಾರ್ಷಿಕ ಪ್ರೋತ್ಸಾಹ ಧನ ವಿತರಿಸಲು ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲು ತೀರ್ಮಾನಿಸಿದೆ. ಪದವಿ ಪೂರ್ವ ಶಿಕ್ಷಣ (ಪಿಯುಸಿ) ವಿದ್ಯಾರ್ಥಿಗಳಿಗೆ 5 ಸಾವಿರ ರೂ., ಐಟಿಐ/ಜೆಒಸಿ/ಡಿಪ್ಲೋಮ ವಿದ್ಯಾರ್ಥಿಗಳಿಗೆ 5 ಸಾವಿರ ರೂ., ಪದವಿ ವಿದ್ಯಾರ್ಥಿಗಳಿಗೆ 7 ಸಾವಿರ ರೂ., ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 15 ಸಾವಿರ ರೂ., ಆರ್ಯುವೇದಿಕ್/ ಹೋಮಿಯೋಪತಿ ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ., ವೈದ್ಯಕೀಯ, ಡೆಂಟಲ್ ಶಿಕ್ಷಣ ವಿದ್ಯಾರ್ಥಿಗಳಿಗೆ 50 ಸಾವಿರ ರೂ., ವಿದೇಶ ವ್ಯಾಸಂಗ ವಿದ್ಯಾರ್ಥಿಗಳಿಗೆ (ಒಂದು ಬಾರಿ ಮಾತ್ರ) 1 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಯಿತು.
ಧಾರ್ಮಿಕ ಪರಿಷತ್ ಕ್ರಮ ಸ್ವಾಗತಾರ್ಹ:ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಪರಿವಾಗಿ ಸರ್ಕಾರಕ್ಕೆ ಹಲವಾರು ಬೇಡಿಕೆಗಳನ್ನು ಸಲ್ಲಿಸಲಾಗಿತ್ತು. ಅವುಗಳಲ್ಲಿ ಎಲ್ಲವೂ ಸಾಧ್ಯವಾಗದಿದ್ದರೂ, ಕೆಲವನ್ನಾದರೂ ಸರ್ಕಾರ ಈಡೇರಿಸಲು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಆಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ , ಆಗಮಿಕರ, ಉಪಾವಧಿವಂತ ಒಕ್ಕೂಟ ಪ್ರಧಾನ ಕಾರ್ಯದರ್ಶಿ, ಕೆ.ಎಸ್.ಎನ್. ದೀಕ್ಷಿತ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 3 =
Remember me
