ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘದ ಹೊಸ ಸದಸ್ಯತ್ವ ಪಡೆಯಲು ನೀಡಿದ್ದ ಕಾಲಾವಕಾಶವನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ.
ಫೆ.17ರಿಂದ ಆ.31ರವರೆಗೆ ಸದಸ್ಯತ್ವ ಪಡೆಯಲು ಅವಕಾಶ ನೀಡಲಾಗಿತ್ತು. ಆದರೆ, ಸಮುದಾಯದ ಜನರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಸೆ.1ರಿಂದ ನ.31ರವರೆಗೆ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ. ಫೆ.17ರಂದು ಸಂಘದ ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಾಗಿತ್ತು. ಅಂದಿನಿಂದ ಇಂದಿನವರೆಗೆ ಆಪ್‌ಲೈನ್‌ನಲ್ಲಿ 49,522 ಮಂದಿ ಹಾಗೂ ಆನ್‌ಲೈನ್‌ನಲ್ಲಿ 7,637 ಮಂದಿ ಸೇರಿ ಒಟ್ಟು 56,889 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಶುಲ್ಕ 8.5 ಕೋಟಿ ರೂ.ಸಂಗ್ರಹವಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ ತಿಳಿಸಿದರು.
ಸಂಘದಲ್ಲಿ ಸದ್ಯ 5,22,454 ಮಂದಿ ಅಜೀವ ಸದಸ್ಯತ್ವ ಪಡೆದಿದ್ದಾರೆ. ಹಿಂದೆ ಸಂಘದಲ್ಲಿ ಸಂಗ್ರಹವಾಗಿದ್ದ ಶುಲ್ಕದ ಮೊತ್ತ 88 ಕೋಟಿ ರೂ.ನ್ನು ಬ್ಯಾಂಕಿನಲ್ಲಿ ಠೇವಣಿ ಇಡಲಾಗಿದ್ದು, ಇದರಿಂದ ಬರುವ ಬಡ್ಡಿ ಹಣವನ್ನು ಸಂಘದ ಅಭ್ಯುದಯಕ್ಕೆ ಬಳಸಿಕೊಳ್ಳಲಾಗುತ್ತಿದೆ. 18 ವರ್ಷ ತುಂಬಿದವರು ಸದಸ್ಯತ್ವ ಪಡೆಯಬಹುದು. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಜನರು ಇದ್ದಾರೆ. ಆಯಾ ಜಿಲ್ಲೆಯ ಡಿಸಿಸಿ ಬ್ಯಾಂಕ್‌ಗಳಲ್ಲಿ 1,650 ರೂ.ಶುಲ್ಕ ಪಾವತಿಸಿ ಅರ್ಜಿ ಪಡೆಯಬಹುದು. ಅರ್ಜಿ ಪಡೆದ ದಿನದಿಂದ 30 ದಿನದೊಳಗೆ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಅಥವಾ ಶಾಲಾ ಟಿಸಿ, ಎರಡು ಭಾವಚಿತ್ರ ಸಹಿತ ಇತರ ದಾಖಲೆಗಳೊಂದಿಗೆ ಅರ್ಜಿಯನ್ನು ಬ್ಯಾಂಕಿಗೆ ಹಿಂದಿರುಗಿಸಬೇಕು ಎಂದು ಡಿ. ಹನುಮಂತಯ್ಯ ವಿವರಿಸಿದರು.
ಇದನ್ನೂ ಓದಿ:ಜಿಲ್ಲೆಯ, ರಾಜ್ಯದ ರೈತರಿಗೆ ದ್ರೋಹ ಮಾಡಿದ ಸರ್ಕಾರ:ಆರೋಪ
2015ರಲ್ಲಿ ಕಾಂತರಾಜು ಆಯೋಗ ತಯಾರಿಸಿದ ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಗಡೆ ಹೇಳಿದ್ದಾರೆ ಹಾಗೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ವರದಿ ಸ್ವೀಕರಿಸಿ ಅಂಗೀಕರಿಸುವುದಾಗಿ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇವೆ. ಯಾವುದೇ ಕಾರಣಕ್ಕೂ ಈ ವರದಿಯನ್ನು ಅಂಗೀಕಾರ ಮಾಡಬಾರದು. ಅವೈಜ್ಞಾನಿಕವಾಗಿ ತಯಾರಿಸಿರುವ ಈ ವರದಿಯನ್ನು ಸ್ವೀಕರಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಹೇಳಿದ್ದಾರೆ. ಸಂಘದ ಉಪಾಧ್ಯಕ್ಷ ಸಿ.ದೇವರಾಜು, ಖಜಾಂಚಿ ಸಿ.ಎಂ.ಮಾರೇಗೌಡ, ನಿರ್ದೇಶಕರಾದ ಮಂಜೇಗೌಡ, ಸಿ.ಗಂಗಾಧರ್ ಮತ್ತಿತರರಿದ್ದರು.
ಜಾತಿಗಣತಿ ವರದಿ ತಯಾರಿಸಿ 8 ವರ್ಷ ಕಳೆದಿದೆ. ಪ್ರತಿ 10 ವರ್ಷಕ್ಕೊಮ್ಮೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕೆಂಬ ನಿಯಮ ಇರುವುದರಿಂದ ಈ ವರದಿಯು ಅಪ್ರಸ್ತುತವಾಗಿದೆ. 8 ವರ್ಷದಲ್ಲಿ ಸಮಾಜದಲ್ಲಿ ಹಲವು ಬದಲಾವಣೆಗಳಾಗಿವೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿಯ ನೈಜ ಸ್ಥಿತಿಗತಿಯನ್ನು ವರದಿ ಬಿಂಬಿಸುವುದಿಲ್ಲ. ಆದ್ದರಿಂದ, ನಿಖರ ದತ್ತಾಂಶ ಪಡೆದು ಹೊಸದಾಗಿ ಜಾತಿಗಣತಿ ವರದಿ ತಯಾರಿಸುವುದು ಸೂಕ್ತ.ಹೆಚ್.ಸಿ.ಜಯಮುತ್ತು, ಪ್ರಧಾನ ಕಾರ್ಯದರ್ಶಿ, ರಾಜ್ಯ ಒಕ್ಕಲಿಗರ ಸಂಘ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
