ಬೆಂಗಳೂರು:ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್ 1 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾಗಿದ್ದ ಅಶೋಕ್ ಗಸ್ತಿ ಕರೊನಾ ಸೋಂಕಿನಿಂದ ಇತ್ತೀಚಿಗೆ ಮೃತಪಟ್ಟರು. ಪ್ರಮಾಣವಚನ ಸ್ವೀಕರಿಸಿದ್ದ ಗಸ್ತಿ, ಒಂದೇ ಒಂದು ಅಧಿವೇಶನದಲ್ಲೂ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಬಿಜೆಪಿಗೆ ತನ್ನ ಸಂಖ್ಯಾಬಲದ ಮೇಲೆ ಈ ಸ್ಥಾನಕ್ಕೆ ಆಯ್ಕೆ ಮಾಡಲು ಮಾತ್ರ ಅವಕಾಶವಿದೆ. ಹಾಗಾಗಿ ನ.5ರಂದು ಮಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆಗಳಿವೆ.
ಕಳೆದ ಬಾರಿ ಬಿಜೆಪಿ ಪಕ್ಷದ ಇಬ್ಬರು ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ದೆಹಲಿ ಹೈಕಮಾಂಡ್ ಆಯ್ಕೆ ಮಾಡಿತ್ತು. ಈರಣ್ಣ ಕಾಡಾಡಿ ಮತ್ತು ಅಶೋಕ್ ಗಸ್ತಿ ಅವರನ್ನು ಆಯ್ಕೆ ಮಾಡಿ ರಾಜ್ಯ ಬಿಜೆಪಿಯಲ್ಲಿ ಅಚ್ಚರಿ ಮೂಡಿಸಿತ್ತು. ಈ ಬಾರಿ ಪಕ್ಷದ ಪ್ರಮುಖ ನಾಯಕರೇ ಈ ಹುದ್ದೆ ಮೇಲೆ ಕಣ್ಣಿಟ್ಟಿದ್ದು, ಹೈಕಮಾಂಡ್ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎನ್ನಲಾಗಿದೆ.
ಚುನಾವಣಾ ದಿನಾಂಕದ ಮಾಹಿತಿ ಇಲ್ಲಿದೆಅಧಿಸೂಚನೆ ಪ್ರಕಟ- ನವೆಂಬರ್​ 11ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ- ನವೆಂಬರ್ 18ನಾಮಪತ್ರ ಪರಿಶೀಲನೆ- ನವೆಂಬರ್ 19ನಾಮಪತ್ರ ಹಿಂಪಡೆಯಲು ಕೊನೆಯ ದಿನ- ನವೆಂಬರ್ 23ಮತದಾನ- ಡಿಸೆಂಬರ್ 1ರ ಬೆಳಗ್ಗೆ 9ರಿಂದ ಸಂಜೆ 4. ಅಂದು ಸಂಜೆ 5ಕ್ಕೆ ಮತಎಣಿಕೆ
ನಾನು ಕಳೆದುಕೊಂಡ ಅರಿಶಿನ-ಕುಂಕುಮವನ್ನು ಮತದ ರೂಪದಲ್ಲಿ ಭಿಕ್ಷೆ ನೀಡಿ…

VIDEO| ಸಮಾವೇಶದಲ್ಲೇ ಕುಸಿದುಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ!

ಬಿ.ವೈ.ವಿಜಯೇಂದ್ರ ಟೆಂಪಲ್ ರನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
