ಬೆಂಗಳೂರು:ವಿಧಾನಸೌಧದ ಪಡಸಾಲೆಯಲ್ಲಿ ರಾಜ್ಯಸಭೆಯ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್​ನ ನಾಸಿರ್​ ಹುಸೇನ್​ ಬೆಂಬಲಿಗರು ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹದ ಘೋಷಣೆ ಕೂಗಿದ್ದು, ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ನಾಸಿರ್‌ ಹುಸೇನ್‌ ಅವರನ್ನು ಈ ಬಗ್ಗೆ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ದರ್ಪದಿಂದ ಉತ್ತರಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​ ಕಾರ್ಯಕರ್ತರಿಂದ ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹಿ ಹೇಳಿಕೆ: ಆರ್.ಅಶೋಕ್​ ಆಕ್ರೋಶ
ನಿಮ್ಮ ಬೆಂಬಲಿಗರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆಯನ್ನು ವಿಧಾನಸೌಧದಲ್ಲೇ ಕೂಗಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದಾಗ, ‘ಏನ್‌ ನಡಿಯೋ ಆಚೆ..’ ಎಂದು ಪತ್ರಕರ್ತನ ವಿರುದ್ಧ ಕಿಡಿಕಾಡಿದ್ದಾರೆ. ಹುಚ್ಚರ ಥರ ಪ್ರಶ್ನೆ ಕೇಳಬೇಡ ಎಂದಿದ್ದಾರೆ.
ಬಳಿಕ ಖಾಸಗಿ ಟಿವಿಗೆ ನೀಡಿದ ಹೇಳಿಕೆಯಲ್ಲಿ, ಈ ರೀತಿ ಕೂಗಿದ್ದು ನನಗೆ ಕೇಳಿಸಿಲ್ಲ. ಹಾಗೇನಾದರೂ ಹೇಳಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳುವ ಈ ಹೇಳಿಕೆಯಿಂದ ಜಾರಿಗೊಂಡಿದ್ದಾರೆ.
ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಪಡಸಾಲೆಯಲ್ಲಿ ರಾಜ್ಯಸಭೆಯ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್​ನ ನಾಸಿರ್​ ಹುಸೇನ್​ ಬೆಂಬಲಿಗರು ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹದ ಘೋಷಣೆ ಕೂಗಿದ್ದು ಬಿಜೆಪಿ ಸೇರಿದಂತೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗುತ್ತಿದೆ.
ಕಾಂಗ್ರೆಸ್​ ಕಾರ್ಯಕರ್ತರಿಂದ ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹಿ ಹೇಳಿಕೆ: ಆರ್.ಅಶೋಕ್​ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
