ಬೆಂಗಳೂರು:ರಾಜ್ಯಸಭಾ ಚುನಾವಣೆ ಮತದಾನ ಆರಂಭವಾಗಿದೆ. ಮತ್ತೊಂದೆಡೆ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ-ಜೆಡಿಎಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ಏತನ್ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಬಿ.ಎಸ್.ಯಡಿಯೂರಪ್ಪ ಅವರು ಕರೆ ಮಾಡಿ ತಮ್ಮ ಅಭ್ಯರ್ಥಿಗೆ ಮತ ಹಾಕುವಂತೆ ಹೇಳುತ್ತಿದ್ದು, ಇವರಿಗೆ ಕಾಮನ್ ಸೆನ್ಸ್ ಇದೆಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾ‌ರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜಕೀಯದಲ್ಲಿ ಸ್ವಲ್ಪ ಬೇಸಿಕ್ ಕಾಮನ್ ಸೆನ್ಸ್ ಇರಬೇಕು. 136 ಶಾಸಕರು ಗೆದ್ದು ಆಡಳಿತ ನಡೆಸುತ್ತಿದ್ದೇವೆ. ಆದರೂ ಬಿಜೆಪಿ ನಾಯಕರು ನಮ್ಮ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ನಿನ್ನೆ ಶಾಮನೂರು ಶಿವಶಂಕರಪ್ಪ ಅವರಿಗೆ ಬಿಎಸ್​​​​ವೈ ಕರೆ ಮಾಡಿ ಮತ ಹಾಕಲು ಹೇಳಿದ್ದಾರೆ. ಹಿರಿಯ ನಾಯಕರನ್ನೂ ಅವರು ಬಿಡುತ್ತಿಲ್ಲ. ನಮ್ಮ 42 ಶಾಸಕರನ್ನು ಬಿಜೆಪಿ-ಜೆಡಿಎಸ್ ನಾಯಕರು ಸಂಪರ್ಕಿಸಿದ್ದಾರೆ. ಇಲ್ಲಿ ಗೆದ್ದಿರುವ ಶಾಸಕರನ್ನು ಹಣ ಕೊಟ್ಟು ಕುದುರೆ ವ್ಯಾಪಾರ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹೆದರಿಸಿ ಬೆದರಿಸಿ ವೋಟ್ ಹಾಕಿ ಅನ್ನುವುದು ಸರಿಯಲ್ಲ. ಹಣ ಇದೆ ಎಂದು ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ನೆಂಟಸ್ತನ ಬೇರೆ, ಬೀಗತನ ಬೇರೆ, ರಾಜಕಾರಣ ಬೇರೆ ಎಂದು ಡಿ.ಕೆ.ಶಿವಕುಮಾರ್ ಗುಡುಗಿದರು.
Rajyasabha Election: ಶುರುವಾದ ಮತದಾನ; ಮೊದಲು ಮತ ಚಲಾಯಿಸಿದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + nineteen =
Remember me
