ಬೆಂಗಳೂರು:ನಟ ಬುಲೆಟ್‌ ಪ್ರಕಾಶ್‌ ಅವರ ಪುತ್ರ ರಕ್ಷಕ್‌ ಬುಲೆಟ್‌ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ತಂದೆ ಬುಲೆಟ್ ಪ್ರಕಾಶ್ ಹಾಗೂ ಅಜ್ಜಿ ಗೌರಮ್ಮ ಅವರ ಸಮಾಧಿಯನ್ನು ತೊಳೆದಿದ್ದಾರೆ.
ವಿಡಿಯೊದಲ್ಲಿ ರಕ್ಷಕ್‌ ಮಾತನಾಡಿದ್ದು, ನನಗೆ ಎಷ್ಟೇ ಖುಷಿ , ಬೇಜಾರು ಆದರೂ ಇಲ್ಲಿ ಬಂದು 5 ನಿಮಿಷ ಕೂತು ನನ್ನ ಮನಸಲ್ಲಿ ಇರೋದು ಹೇಳ್ಕೊಂಡಾಗ ತುಂಬ ಖುಷಿ, ನೆಮ್ಮದಿ ಕೂಡ ಆಗತ್ತೆ. ನಾವು ಕ್ಲೀನ್ ಆಗಿದ್ದಂತೆ, ಇವರು ಕ್ಲೀನ್ ಆಗಿರಬೇಕು. ಹೀಗಾಗಿ, ವಾರಕ್ಕೆ ಒಮ್ಮೆ ಬಂದು ಇಲ್ಲಿ ಸಮಾಧಿ ತೊಳೆದು ಹೋಗುತ್ತೇನೆ ಎಂದಿದ್ದಾರೆ.
ಎಲ್ಲರೂ ಕೇಳುತ್ತಾರೆ 3 ವರ್ಷದಲ್ಲಿ ರಕ್ಷಕ್‌ ಹೆಂಗೆ ಬೆಳೆದುಬಿಟ್ಟ ಅಂತ. ಈ ಮೂರು ವರ್ಷದ ಹಿಂದೆ ಶ್ರಮ ಇದೆ. ನಮ್ಮ ಅಜ್ಜಿ, ತಂದೆನ ತುಂಬಾ ಚೆನ್ನಾಗಿ ನೋಡಿಕೊಂಡಿದ್ದೇನೆ. ಮಗು ರೀತಿ ನೋಡಿಕೊಂಡಿದ್ದೇನೆ. ಊದಿನಕಡ್ಡಿ ಹಚ್ಚಿ, ಅವರಿಷ್ಟದ ತಿಂಡಿನ ಇಟ್ಟು ಹೋಗುತ್ತೇನೆ. ನಮಸ್ಕಾರ ಮಾಡಿ ಹೋಗುತ್ತೇನೆ. ದೊಡ್ಡವರ ಆಶೀರ್ವಾದ ಇದ್ದರೆ ಬೆಳೆಯುತ್ತೀರಾ. ದೊಡ್ಡವರ ಆಶೀರ್ವಾದವೇ ಇದಕ್ಕೆ ಕಾರಣ’ ಎಂದಿದ್ದಾರೆ.

A post shared by rakshak sena (@rakshak_bullet)

ಈ ವಿಡಿಯೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ದೇವರು ನಿನಗೆ ಒಳ್ಳೆಯದು ಮಾಡಲಿ. ಆಶಿರ್ವಾದ ನಿನಗೆ ಸಾದ ಇರುತ್ತದೆ ಎಂದು ನೆಟ್ಟಿಗರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
