ಬೆಂಗಳೂರು:ನಟ, ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ದಂಪತಿ ಒಟ್ಟಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.
ಇದನ್ನೂ ಓದಿ:ಹುಟ್ಟೂರಿನಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ; ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಫ್ಯಾನ್ಸ್!
ಮತದಾನದ ಬಳಿಕ ಮಾತನಾಡಿದ ನಿರ್ದೇಶಕ ಪ್ರೇಮ್, ದುಡ್ಡು ಪಡೆದುಕೊಂಡು ಯಾರೂ ಮತ ಹಾಕಬೇಡಿ. ಒಬ್ಬೊಬ್ಬರು ಮನೆ ಹತ್ತಿರ ವೋಟ್ ಹಾಕಿ ಎಂದು ಬರುತ್ತಾರೆ. ಇನ್ನು ಕೆಲವರು ಬಂದು ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ ಮತ ಹಾಕಿ ಎನ್ನುತ್ತಾರೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹಕ್ಕನ್ನು ಮಾರಿಕೊಳ್ಳಬೇಡಿ. ಒಳ್ಳೆಯ ವ್ಯಕ್ತಿ, ಕೆಲಸ ಮಾಡುವ ಅಭ್ಯರ್ಥಿಗೆ ಮತ ನೀಡಿ ಎಂದು ಹೇಳಿದರು.
ಇದನ್ನೂ ಓದಿ:ಮಕ್ಕಳೊಂದಿಗೆ ತೆರಳಿ ಮತ ಚಲಾಯಿಸಿದ ಸಿಎಂ ಬೊಮ್ಮಾಯಿ
ಮತದಾನ ಪ್ರತಿಯೊಬ್ಬರ ಅಧಿಕಾರ ಆಗಿದ್ದು, ಪ್ರತಿಯೊಬ್ಬ ನಾಗರೀಕರೂ ಅವಕಾಶ ಬಳಸಿಕೊಳ್ಳಬೇಕು. ಯಾರು ಚೆನ್ನಾಗಿ ಕೆಲಸ ಮಾಡುತ್ತಾರೆ, ಒಳ್ಳೆಯ ಅಭಿವೃದ್ಧಿ ಮಾಡುವವರಿಗೆ ಮತ ನೀಡಿ ಎಂದು ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 18 =
Remember me
