ಮೈಸೂರು:ಬಿಜೆಪಿಯಲ್ಲಿ ಟಿಕೆಟ್​ವಂಚಿತರೇ ಪಕ್ಷಕ್ಕೆ ಮುಳುವಾಗುತ್ತಿದ್ದು, ಮಾಜಿ ಸಚಿವ ಎಸ್​.ಎ.ರಾಮದಾಸ್ ಕೂಡ ರಾಜೀನಾಮೆ ಕೊಟ್ಟರೂ ಅಚ್ಚರಿ ಇಲ್ಲ ಎಂಬಂತಾಗಿದೆ. ಪಕ್ಷದಲ್ಲಿ ಇರಬೇಕೋ ಬೇಡವೋ ಎಂಬ ಬಗ್ಗೆ ನಾಳೆ ತಿಳಿಸುತ್ತೇನೆ ಎನ್ನುವ ಮೂಲಕ ಅವರು ಒಂದು ಕಾಲು ಆಚೆ ಇಟ್ಟಂತಿದೆ.
ಕೃಷ್ಣರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಎಸ್​.ಎ.ರಾಮದಾಸ್ ಮೂರನೇ ಪಟ್ಟಿಯಲ್ಲಾದರೂ ತಮ್ಮ ಹೆಸರು ಇರುತ್ತದೆ ಎಂದುಕೊಂಡಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದ್ದು, ಕೃಷ್ಣರಾಜ ಕ್ಷೇತ್ರದ ಟಿಕೆಟ್ ಮೈಸೂರು‌ ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಪಾಲಾಗಿದೆ. ಇದರಿಂದ ತೀವ್ರ ಬೇಸರಗೊಂಡಿರುವ ರಾಮದಾಸ್ ತಮ್ಮನ್ನು ಭೇಟಿಯಾಗಲು ಬಂದಿದ್ದ ಸಂಸದ ಪ್ರತಾಪ್​ಸಿಂಹ ಹಾಗೂ ಅಭ್ಯರ್ಥಿ ಶ್ರೀವತ್ಸ ಮುಂತಾದವರನ್ನು ಭೇಟಿಯಾಗದೆ ವಾಪಸ್ ಕಳಿಸಿದ್ದಾರೆ.
ಇದನ್ನೂ ಓದಿ:ಪ್ರತಾಪ್​ಸಿಂಹ-ಶ್ರೀವತ್ಸಗೆ ರಾಮದಾಸ್​ ಅಭಿಮಾನಿಗಳ ತಡೆ; ಅರ್ಧ ಗಂಟೆಯಿಂದ ಭೇಟಿಗಾಗಿ ಕಾಯುತ್ತಿರುವ ಸಂಸದ-ಅಭ್ಯರ್ಥಿ
ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಸಂಸದ ಪ್ರತಾಪ್​ಸಿಂಹ ಹಾಗೂ ಅಭ್ಯರ್ಥಿ ಶ್ರೀವತ್ಸ ಅಲ್ಲಿಂದ ವಾಪಸ್ ಆಗಿದ್ದಾರೆ. ರಾಮದಾಸ್ ಅವರ ಆಶೀರ್ವಾದ ಪಡೆಯಲು ಬಂದಿದ್ದೆವು. ಆದರೆ ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ್ದರಿಂದ ಅವರಿಗೆ ಬೇಸರ ಆಗಿರುವುದು ಸಹಜ. ಅದಾಗ್ಯೂ ‘ನಾಳೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಪಕ್ಷದ ಜೊತೆ ಇರುತ್ತೇನೆ’ ಎಂದು ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ. ಪಕ್ಷವನ್ನು ತಾಯಿ ಎಂದು ಭಾವಿಸಿರುವವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಪ್ರತಾಪ್​ಸಿಂಹ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!
30 ವರ್ಷಗಳಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಆಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬುದುನ್ನು ನಾಳೆ ಸಂಜೆ ತಿಳಿಸುತ್ತೇನೆ ಎಂದು ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಮಾತನಾಡಿದ ಅವರು, ನಾನು ಯಾರನ್ನೂ ಭೇಟಿ ಆಗಿಲ್ಲ. ಪಕ್ಷದಲ್ಲಿರಬೇಕಾ ಬೇಡವಾ ಎಂಬ ಕುರಿತು ನಾಳೆ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಪಕ್ಷಕ್ಕಾಗಿ ದುಡಿದಿದ್ದಾನಂತೆ ಸೈಲೆಂಟ್ ಸುನೀಲ್; ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಕಟೀಲ್
ರಾಮದಾಸ್ ಭೇಟಿಗೆ ಬಂದಿದ್ದ ಸಂಸದ ಪ್ರತಾಪ್​ಸಿಂಹ ಮತ್ತು ಅಭ್ಯರ್ಥಿ ಶ್ರೀವತ್ಸ ಅವರಿಗೆ ರಾಮದಾಸ್ ಅಭಿಮಾನಿಗಳು ತಡೆಯೊಡ್ಡಿದ್ದರು. ಅಲ್ಲದೆ ಅವರಿಬ್ಬರ ಭೇಟಿಗೆ ಅವಕಾಶ ಕೊಡದ ರಾಮದಾಸ್, ಮನೆಯ ಮತ್ತೊಂದು ಬಾಗಿಲಿನಿಂದ ಹೊರ ನಡೆದು ಭೇಟಿಯಾಗುವುದನ್ನು ತಪ್ಪಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ನಾಳೆ ಅವರು ಯಾವ ನಿರ್ಧಾರ ಪ್ರಕಟಿಸಲಿದ್ದಾರೆ ಎಂಬುದು ಈಗ ಬಿಜೆಪಿ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಸದ್ಯದಲ್ಲೇ ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಮೂರನೇ ಪಟ್ಟಿ ಬಿಡುಗಡೆ ಬೆನ್ನಿಗೇ ಆಕಾಂಕ್ಷಿಯ ಅಸಮಾಧಾನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − ten =
Remember me
