ಬೆಂಗಳೂರು:ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಸಾರಿಗೆ ಬಸ್​​​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವುದು ಇದೀಗ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗಿ ಪರಿವರ್ತಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ(Ramalinga Reddy)ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಸಚಿವ ದಿನೇಶ್​ ಗುಂಡೂರಾವ್ ವಾಗ್ದಾಳಿ
“ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಬಸ್​​ನಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ, ಹಾಗಾಗಿ ಬಸ್​​ಗಳಲ್ಲಿ ರಶ್ ಆಗಿ ಸ್ವಲ್ಪ ಸಮಸ್ಯೆಯಾಗಿದೆ. ಇದೆಲ್ಲಾ ತಿಂಗಳೊಳಗೆ ಸರಿಯಾಗಲಿದೆ” ಎಂದು ಹೇಳಿದ್ದಾರೆ.
“ಒಮ್ಮೆ ದೇವಸ್ಥಾನಕ್ಕೆ ಹೋದವರು ಪದೇ ಪದೇ ಹೋಗುವುದಿಲ್ಲ. ಈ ವಾರಂತ್ಯದಲ್ಲಿ ಕೆಲ ಧಾರ್ಮಿಕ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಬಿಡಲಾಗುವುದು. ನಮಗೆ ಎಷ್ಟೇ ಕಷ್ಟ ಎದುರಾದರೂ ಸದ್ಯದ ನಿಯಮವನ್ನು ಬದಲಾಯಿಸುವ ಮಾತಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅನ್ನಭಾಗ್ಯ ಯೋಜನೆ: ಹೆಚ್ಚುವರಿ ಅಕ್ಕಿಗಾಗಿ ಕೇಂದ್ರದ ಮೊರೆ ಹೋಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ನಿರಾಸೆ
“ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ(Students)ಬಸ್ ಸ್ಟಾಪ್​​ಗಳಲ್ಲಿ ಕಡ್ಡಾಯವಾಗಿ ನಿಲುಗಡೆ ಕೊಡಬೇಕು. ಈ ಕುರಿತು ಈಗಾಗಲೇ ನಾವು ಅಧಿಕಾರಿಗಳ ಮುಖಾಂತರ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದೇವೆ. ಪುಣ್ಯ ಕ್ಷೇತ್ರಗಳ ಮಾರ್ಗದಲ್ಲಿ ಹೋಗುತ್ತಿರುವ ಬಸ್​​ಗಳು ಹೆಚ್ಚು ರಶ್ ಆಗುತ್ತಿವೆ. ಸದ್ಯದಲ್ಲೇ ಕ್ರಮೇಣವಾಗಿ ಅಲ್ಲಿನ ಸಮಸ್ಯೆ ಬಗೆಹರಿಯಲಿದೆ” ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
