ಬೆಂಗಳೂರು:ಇದೀಗ 11 ಗಂಟೆಗೆ ಸಂಪುಟ ಸಭೆ ಶುರುವಾಗಲಿದ್ದು ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.
ಇದನ್ನೂ ಓದಿ:ಅತ್ತೆ-ಸೊಸೆ ಜಗಳಕ್ಕೆ ಕಾರಣವಾಗುತ್ತಾ ಗೃಹಲಕ್ಷ್ಮಿ ಗ್ಯಾರಂಟಿ? ಮಹಿಳೆಯರ ಅಭಿಪ್ರಾಯ ಹೀಗಿತ್ತು…
ಚುನಾವಣೆಗೂ ಮುನ್ನ ಘೋಷಿಸಿದ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಕಾಂಗ್ರೆಸ್​ ಸರ್ಕಾರ ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ, 200 ಯೂನಿಟ್​ ವಿದ್ಯುತ್​ ಮತ್ತು 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಗ್ಯಾರಂಟಿ ಯೋಜನೆಯನ್ನು ಸರ್ಕಾರ ಜಾರಿಗೆ ತರಲಿದ್ದು, ಉಳಿದ ಎರಡು ಗ್ಯಾರಂಟಿಗಳಾದ ಮನೆಯೊಡತಿಗೆ 2000 ರೂಪಾಯಿ ಮತ್ತು ನಿರುದ್ಯೋಗಿ ಪದವೀಧರರಿಗೆ 3000 ಸಾವಿರ ರೂ. ಹಣ ನೀಡುವ ಯೋಜನೆಯನ್ನು ಕೆಲ ತಿಂಗಳಗಳು ನಂತರ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ:‘ಗ್ಯಾರಂಟಿ’ಗಾಗಿ ಸಿಎಂ-ಸಚಿವರ ಸಭೆ: ಕೊನೆಗೇನು ನಿರ್ಧಾರ?
ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, “11 ಗಂಟೆಗೆ ಸಚಿವ ಸಂಪುಟ ಸಭೆ ಇದೆ. ಸಚಿವ ಸಂಪುಟದ ನಂತರ ಗ್ಯಾರಂಟಿಯನ್ನ ಘೋಷಣೆ ಮಾಡ್ತಾರೆ. ಸ್ವತಃ ಸಿಎಂ ಸಿದ್ದರಾಮಯ್ಯನವರೆ ಗ್ಯಾರಂಟಿ ಬಗ್ಗೆ ಘೋಷಣೆ ಮಾಡ್ತಾರೆ. ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಗುತ್ತಾ? ಕಾದು ನೋಡಿ ಮಧ್ಯಾಹ್ನ 1 ಗಂಟೆಗೆ ಗೊತ್ತಾಗುತ್ತೆ” ಎಂದು ರಾಮಲಿಂಗರೆಡ್ಡಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
