
ಬೆಂಗಳೂರು:ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಬಾರದು ಎಂದು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ರ ಬರೆದಿದ್ದಾರೆ.ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಕ್ಷೋಸ್ ಪೇಟೆಗೆ ರಾಮನಗರ ಎಂದು ನಾಮಕರಣ ಮಾಡಿದವರು ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರು. ನಡೆದಾಡುವ ದೇವರ ಸಿದ್ದಗಂಗಾ ಶ್ರೀಗಳು ಮತ್ತು ಆದಿಚುಂಚನಗಿರಿಯ ಬಾಲಗಂಗಾದರನಾಥ ಸ್ವಾಮೀಜಿ ಅವರು ಜನಿಸಿದ್ದು ಇದೇ ಜಿಲ್ಲೆಯಲ್ಲಿ. ಬೆಂಗಳೂರು ನಿರ್ಮಾಮೃತ ಕೆಂಪೇಗೌಡರು ಈ ಜಿಲ್ಲೆಗೆ ಸೇರಿದವರು ಎಂದು ಜಿಲ್ಲೆಯ ಸುಧೀರ್ಘ ಇತಿಹಾಸವನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಅಭಿವೃದ್ಧಿ ದೃಷ್ಟಿಯಿಂದ 2007ರಿಂದ ರಾಮನಗರ ಜಿಲ್ಲೆಯಾಗಿದೆ. ಈ ಜಿಲ್ಲೆಗೆ ತನ್ನದೇ ಆದ ಹಲವು ಮಹತ್ವತೆ ಇದೆ. ಅದನ್ನು ಕಡೆಗಣಿಸಿ, ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲು ಹೊರಟಿರುವುದು ಸರಿಯಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ಈ ಪ್ರಸ್ತಾವನೆಯನ್ನು ತಿರಸ್ಕರಿಸಬೇಕು ಎಂದು ಡಾ.ಮಂಜುನಾಥ್ ವಿನಂತಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
