ರಾಮನಗರ:ಇಲ್ಲಿನ ಉಪವಿಭಾಗಾಧಿಕಾರಿ(ಎಸಿ)ಯನ್ನ ತೆಗೆಯಬೇಕು ಎಂದು ನಿರ್ಧಾರ ಮಾಡಿದ್ದೆ. ಮುಖ್ಯಮಂತ್ರಿಗಳು ಕೂಡ ಆದೇಶದ ಮಾಡಿದ್ದರು. ನಂತರ ಅಲ್ಲಿ ಏನೇನು ಆಟ ನಡೆದಿದೆ ಎಂಬುದು ನನಗೆಲ್ಲ ಗೊತ್ತಿದೆ. ಸಿಎಂ ಕಚೇರಿಯಿಂದ ಯಾರ್ಯಾರಿಗೆ ಪೇಮೆಂಟ್ ಆಗಿದೆ ಅಂತಾನೂ ಗೊತ್ತಿದೆ. ನಾನು ನೇರವಾಗಿ ಹೇಳ್ತಿದ್ದೇನೆ. ಇಲ್ಲಿನ ಎಸಿ ನನಗೆ 3 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು… ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ವಿಚಾರವಾಗಿ ಗಂಭೀರ ಆರೋಪ ಮಾಡಿದ ಎಚ್​ಡಿಕೆ, ವರ್ಗಾವಣೆ ತಡೆಯಲು ಕಮಿಷನ್​ ಕೊಡು ಎಸಿ ರಾಮನಗರದ ಜನರನ್ನು ಉಳಿಸುತ್ತಾರಾ? ಅವರಿವರಿಗೆ ಕೊಟ್ಟ ಹಣವನ್ನ ಜನರಿಂದಲೇ ಅವರು ವಸೂಲಿ ಮಾಡಬೇಕಾಗುತ್ತೆ. ಇಲ್ಲಿನ ಅಧಿಕಾರಿಗಳು ಏಜೆಂಟ್​ಗಳ ಮೂಲಕ ಹಣ ಕೊಟ್ಟು ನಂತರ ಜನ್ರ ಜೇಬಿಗೆ ಕೈ ಹಾಕುತ್ತಾರೆ. ಈ ಸರ್ಕಾರಕ್ಕೆ ಮರ್ಯಾದೆ ಇದ್ರೆ ಇಂತಹ ಅಧಿಕಾರಿಗಳನ್ನ ಹಿಟ್ಟುಕೊಳ್ಳಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿರಿಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು
ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ನಾನು ಮಾತನಾಡುತ್ತಿಲ್ಲ. ರಾಜ್ಯದ ಜನತೆ ಮತ್ತು ಬಿಜೆಪಿ ಶಾಸಕರೇ ಆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
ಇನ್ನು ಸಿ.ಪಿ.ಯೋಗೇಶ್ವರ್ ವಿರುದ್ಧವೂ ಕಿಡಿಕಾರಿದ ಎಚ್​ಡಿಕೆ, ಯೋಗೇಶ್ವರ್ ವಸೂಲಿ ಬಗ್ಗೆ ಊರುಗಳಲ್ಲೇ ಚರ್ಚೆ ಆಗ್ತಿದೆ, ಇದನ್ನ ನಾನು ಆರೋಪ ಮಾಡ್ತಿಲ್ಲ ಎಂದರು. ಇನ್ನು ನಮ್ಮ ಕುಟುಂಬ ಯಾರಿಗೂ ರಾಜಿಯಾಗಲ್ಲ. ಪ್ರಧಾನಮಂತ್ರಿಯನ್ನೇ ನೋಡಿರುವ ಕುಟುಂಬ ನಮ್ಮದು. ಹಾಗಾಗಿ ಒಂದು ಮಂತ್ರಿ ಸ್ಥಾನಕ್ಕೆ ಹೆದರುತ್ತಾನಾ? ಯೋಗೇಶ್ವರ್ ಮಂತ್ರಿಯಾಗಿದ್ದಾಗಲೇ ಸೋಲಿಸಿದ್ದೇವೆ. ಚನ್ನಪಟ್ಟಣಕ್ಕೆ ನಾನು ಚುನಾವಣೆಯಲ್ಲಿ ಹೋಗಿರಲಿಲ್ಲ. ಆದರೂ ಕ್ಷೇತ್ರದ ಜನತೆಯೇ ನನಗೆ ಆಶೀರ್ವಾದ ಮಾಡಿದರು. ಇಂತಹ ಮಂತ್ರಿ ಸ್ಥಾನಗಳನ್ನ ಎಷ್ಟು ನೋಡಿಲ್ಲ ನಾನು ಎಂದು ಸಿಪಿವೈ ವಿರುದ್ಧ ವಾಗ್ದಾಳಿ ನಡೆಸಿದರು.
ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?

ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ಸೆಕ್ಸ್​ ಮಾಡುವಾಗ ಉಸಿರುಗಟ್ಟಿ ಸತ್ತೇ ಹೋದಳು… ಬ್ಯಾಚಲರ್​ ಮನೆಯಲ್ಲಿ ವಿವಾಹಿತೆ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 8 =
Remember me
