ರಾಮನಗರ:ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಹೈಟೆನ್ಷನ್​ ವಿದ್ಯುತ್​ ತಂತಿ ತಗುಲಿ ಸೋಮವಾರ ಫೈಟರ್​ ವಿವೇಕ್​(35) ಮೃತಪಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾದ ನಿರ್ದೇಶಕ ಶಂಕರ್ ರಾಜ್, ಸಾಹಸ ಕಲಾವಿದ ವಿನೋದ್ ಹಾಗೂ ಕ್ರೇನ್ ಚಾಲಕ ಮುನಿಯಪ್ಪನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ತಡರಾತ್ರಿ ಜಡ್ಜ್ ಮುಂದೆ ಹಾಜರು ಪಡಿಸಿದ ಬಿಡದಿ ಪೊಲೀಸರು ತಡರಾತ್ರಿಯೇ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಸೋಮವಾ (ಆಗಸ್ಟ್​ 09) ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್​ನಿಂದ ಫೈಟರ್​ ಹಾಗೂ ಯುವ ಕಲಾವಿದ ವಿವೇಕ್ ಸಾವಿಗೀಡಾಗಿದ್ದರು. ಬಿಡದಿ‌ಯ ಜೋಗನಪಾಳ್ಯ ಗ್ರಾಮದಲ್ಲಿ ನಡೆಯುತ್ತಿದ್ದ ರಚ್ಚು ಲವ್ ಯು ಸಿನಿಮಾ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿತ್ತು.
ಬಿಡದಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಜಮೀನು‌ ಮಾಲೀಕ ಪುಟ್ಟರಾಮು ಸ್ಥಳದಿಂದ ನಾಪತ್ತೆ ಆಗಿದ್ದು, ಆತನಿಗೆಗಾಗಿ ಪೊಲೀಸರ ಹುಟುಕಾಟ ಮುಂದುವರಿದಿದೆ.
ಘಟನೆಯ ವಿವರಣೆನಟ ಅಜಯ್ ರಾವ್ ಮತ್ತು ನಟಿ ರಚಿತ ರಾಮ್ ನಟನೆಯ ‘ಲವ್​ ಯೂ ರಚ್ಚು’ ಕನ್ನಡ ಸಿನಿಮಾ ಶೂಟಿಂಗ್ ಸೋಮವಾರ ರಾಮನಗರದ ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ನಡೆಯುತ್ತಿತ್ತು. ಈ ವೇಳೆ ವಿದ್ಯುತ್​ ಅವಘಡ ಸಂಭವಿಸಿ ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಈ ಪೈಕಿ ಫೈಟರ್​ ತಮಿಳುನಾಡು ಮೂಲದ ​ವಿವೇಕ್ ಮೃತಪಟ್ಟಿದ್ದು, ಮತ್ತೊಬ್ಬನಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಚಿತ್ರೀಕರಣ ವೇಳೆ ಮೆಟಲ್​ ರೋಪ್​ ಬಳಸಿದ್ದೇ ಅವಘಡಕ್ಕೆ ಕಾರಣ. ಹೈ ಟೆನ್ಶನ್​ ತಂತಿಗೆ ತಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಅವಘಡ ಸಂಭವಿಸುತ್ತದ್ದಂತೆ ಚಿತ್ರೀಕರಣ ನಿಲ್ಲಿಸಲಾಗಿದೆ.(ದಿಗ್ವಿಜಯ ನ್ಯೂಸ್​)
‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ದುರಂತ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

VIDEO| ‘ಲವ್​ ಯೂ ರಚ್ಚು’ ಶೂಟಿಂಗ್​ನಲ್ಲಿ ದುರಂತ: ಸಾವಿಗೂ ಮುನ್ನ ಚಿತ್ರೀಕರಿಸಿದ್ದ ವಿವೇಕ್​ರ ಸಾಹಸ ದೃಶ್ಯ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
