ರಾಮನಗರ:ಆಕಸ್ಮಿಕವಾಗಿ ಬಿಟ್ಟು ಹೋಗಿದ್ದ ವೃದ್ಧೆಯ ಚಿನ್ನದ ಸರವನ್ನು ಹಿಂದಿರುಗಿಸಿದ ಯುವಕ ಹರ್ಷವರ್ಧನ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಸಂತೋಷ್ ಬಾಬು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.ಆ.14ರಂದು ಜಯಲಕ್ಷ್ಮಮ್ಮ ಎನ್ನುವರು ಆರೋಗ್ಯ ಸಮಸ್ಯೆಯ ಕಾರಣದಿಂದ ಚನ್ನಪಟ್ಟಣದ ಪುಣ್ಯ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಜಯ ಲಕ್ಷ್ಮಮ್ಮ ಅವರ 45 ಗ್ರಾಂ ಚಿನ್ನದ ಸರವನ್ನು ಆಸ್ಪತ್ರೆಯಲ್ಲಿ ಆಕಸ್ಮಿಕವಾಗಿ ಬಿಟ್ಟು ಹೋಗಿರುತ್ತಾರೆ. ಆದೇ ದಿನ ರಾತ್ರಿ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ್ದ ಹರ್ಷವರ್ಧನ್ ರವರಿಗೆ ಚಿನ್ನದ ಸರವು ಸಿಕ್ಕಿದೆ. ತಕ್ಷಣವೇ ಆಸ್ಪತ್ರೆಯ ಆಡಳಿತ ಮಂಡಳಿಯ ಗಮನಕ್ಕೆ ತಂದು ಆ.15ರಂದು ಚನ್ನಪಟ್ಟಣ ಪುರ ಪೋಲಿಸ್‌ಗೆ ಠಾಣೆಗೆ ಹಿಂದಿರುಗಿಸಿದ್ದಾರೆ. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿ ಜಯಲಕ್ಷ್ಮಮ್ಮ ಅವರಿಗೆ ಪೊಲೀಸ್ ಅಧಿಕಾರಿಗಳ ಮುಖಾಂತರ ಹಿಂದಿರುಗಿಸಲಾಗಿದೆ.ಹರ್ಷವರ್ಧನ್‌ರವರ ಈ ನಿಸ್ವಾರ್ಥ ಕಾರ್ಯವನ್ನು ರಾಮನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ಸಂತೋಷ್ ಬಾಬು ಶ್ಲಾಘಿಸಿ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂಧಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
