ರಾಮನಗರ: ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದ್ದಾರೆ  ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗವಾಡಿದರು.
ಕನಕಪುರದಲ್ಲಿ ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನಗದಿನ ಮೇಲೆ ಇಂಡಿಯಾ ಅಂತಾ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ.
ನಾವೆಲ್ಲರೂ ಭಾರತೀಯರೇ. ಸೋಲಿಗೆ ಹೆದರಿ ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಅವರ ಆಲೋಚನೆಗಳು ಇನ್ನು ಬಹಳ ಇದಾವೆ. ಅವುಗಳನ್ನು ಈಗ ಹೇಳಿದರೆ ಎಲ್ಲರೂ ಶಾಕ್ ಆಗುತ್ತಾರೆ. ಅವುಗಳನ್ನು ಬೇರೆ ಸಮಯದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಈ ಪ್ರಸ್ತಾವನೆಯನ್ನು ವಿರೋಧಿಸುತ್ತೇನೆ. ಇಂತಹ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ನೀವು ಹೆಚ್ಚು ದಿನ ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ. ಇದನ್ನು ಮಾಡಬೇಡಿ” ಎಂದು ತಿಳಿಸಿದರು.
ವಿರೋಧ ಪಕ್ಷಗಳ ಮೈತ್ರಿ ಬಗ್ಗೆ ಕೇಳಿದಾಗ, “ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಬೆಂಗಳೂರಿನಲ್ಲಿ ಹುಟ್ಟಿತು. ಬೆಂಗಳೂರಿನಲ್ಲಿ ಬದಲಾವಣೆ ಆರಂಭವಾಯಿತು. ಇದೇ ತಿಂಗಳು 16,17ರಂದು ತೆಲಂಗಾಣದ ಹೈದರಾಬಾದ್ ನಲ್ಲಿ ಸಭೆ ಸೇರುತ್ತಿದ್ದು, ಎಲ್ಲಾ ಮೈತ್ರಿ ಪಕ್ಷಗಳು ಸೇರಿ ಮುಂದಿನ ತೀರ್ಮಾನ ಮಾಡಲಿವೆ” ಎಂದು ತಿಳಿಸಿದರು.
ಸೆ.7 ಕ್ಕೆ ಭಾರತ್ ಜೋಡೊ ಯಾತ್ರೆಗೆ 1 ವರ್ಷ ತುಂಬುತ್ತದೆ. ಇದೇ ನೆನಪಿಗೆ ಪಾದಯಾತ್ರೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಬೇಕು ಎನ್ನುವ ಯೋಚನೆ ಇತ್ತು. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತದೆ ಎನ್ನುವ ಕಾರಣಕ್ಕೆ ರಾಮನಗರದಲ್ಲಿ ಮಾಡುತ್ತಿದ್ದೇವೆ.
ಮುಖ್ಯಮಂತ್ರಿಗಳು ಅಂದು ನಮ್ಮ ಜೊತೆ ಹೆಜ್ಜೆ ಹಾಕಲಿದ್ದಾರೆ, ಅದೇ ದಿನ ಸಚಿವ ಸಂಪುಟ ಸಭೆ ಇರುವ ಕಾರಣ ಇತರೇ ಮಂತ್ರಿಗಳಿಗೆ ಸೆ.8 ರಂದು ಮಾಡಬಹುದು ಎಂದು ಸೂಚನೆ ನೀಡಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದು ಗಂಟೆಗಳ ಕಾಲ ಸಂಜೆ 5 ರಿಂದ 6 ಗಂಟೆಯ ತನಕ ಈ ಕಾರ್ಯಕ್ರಮ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
