

ರಾಮನಗರ: ಯುವಕನೊಬ್ಬ ನಗರದ ಮಹಿಳಾ ಪಿಯು ಕಾಲೇಜು ಎದುರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಂಜನಾ ಎಂಬುವವರಿಗೆ ಚಾಕುವಿನಿಂದ ಇರಿದು, ಕಾರಿನಲ್ಲಿ ಅಪಹರಿಸಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ‌.
ಕನಕಪುರದ ದಾಳಿಂಬ ಗ್ರಾಮದ ಕುಮಾರ್, ಕನ್ಯಾ ಅವರ ಪುತ್ರಿಯಾದ ಸಂಜನಾ, ಎಂದಿನಂತೆ ಬೆಳಿಗ್ಗೆ 9.15ರ ಸುಮಾರಿಗೆ ಸಹಪಾಠಿಗಳೊಂದಿಗೆ ಕಾಲೇಜಿಗೆ ಬರುತ್ತಿದ್ದರು. ಯುವತಿ ಕಾಲೇಜು ಪ್ರವೇಶದ್ವಾರಕ್ಕೆ ಬರುತ್ತಿದ್ದಂತೆ, ಕಾರಲ್ಲಿ ಬಂದ ಯುವಕ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ.
ನೋವಿನಿಂದ ಕುಸಿದ ಯುವತಿಯನ್ನು ಕಾರಿನೊಳಕ್ಕೆ ಎಳೆದುಕೊಂಡು ಪರಾರಿಯಾಗಿದ್ದಾರೆ. ಘಟನೆ ಗಮನಿಸಿದ ಸ್ಥಳದಲ್ಲಿದ್ದವರು ಕಾರಿಗೆ ಕಲ್ಲು ತೂರಿ ತಡೆಯಲು ಯತ್ನಿಸಿದ್ದಾನೆ. ಆದರೂ, ನಿಲ್ಲಿಸದೆ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಘಟನೆಯನ್ನು ಕಾಲೇಜಿನ ಉಪನ್ಯಾಸಕರಿಗೆ ತಿಳಿಸಿದಾಗ, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪ್ರತ್ಯಕ್ಷದರ್ಶಿಗಳಿಂದ‌ ಮಾಹಿತಿ ಪಡೆದು ಅಪಹರಣಕಾರರ ಪತ್ತೆಗೆ ಬಲೆ ಬೀಸಿದ್ದಾರೆ. ಚಾಕು ಇರಿದು ಅಪಹರಣ ಮಾಡಿದ ಯುವಕನನ್ನು ದಾಳಿಂಬ ಗ್ರಾಮದ ಚೇತನ್ ಎಂದು ಗುರುತಿಸಲಾಗಿದೆ. ಚಾಕು ಇರಿದ ನಂತರ ತೀವ್ರವಾಗಿ ಗಾಯಗೊಂಡಿದ್ದ ಸಂಜನಾಳನ್ನು ತಾನೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ಮಾಹಿತಿ ತಿಳಿದ ಪೊಲೀಸರು ಚಾಕು ಇರಿದ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − one =
Remember me
