ರಾಮನಗರ:ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರ ಪತಿ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೈಲಾಂಚ ಹೋಬಳಿಯ ಗುನ್ನೂರಿನ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ  ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಈ ಸಂಬಂಧ ಪ್ರಾಂಶುಪಾಲರಾದ ಜಯಲಕ್ಷ್ಮೀ ಅವರ ಪತಿ ಸುರೇಶ್ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ದೂರು ನೀಡಿದ್ದಾರೆ.
ಏನಿದು ಪ್ರಕರಣ?: ಗುನ್ನೂರಿನಲ್ಲಿರುವ ವಸತಿ ಶಾಲೆಗೆ ಪ್ರಾಂಶುಪಾಲರಾದ ಜಯಲಕ್ಷ್ಮೀ ಅವರ ಪತಿ ಸುರೇಶ್ ತೆರಳಿ ಅಲ್ಲಿ  ವಿದ್ಯಾರ್ಥಿಗಳ ದೊಣ್ಣೆಯಿಂದ ಹಲ್ಲೆ ಮಾಡಿರುವುದಲ್ಲದೆ, ಅವಾಚ್ಯ ಶಬ್ಧಗಳಿಂದ ನಿಂಧಿಸಿದ್ದಾರೆ.
ವಿದ್ಯಾರ್ಥಿಗಳು ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ದೂರನ್ನು ಸಮಾಜ ಕಲ್ಯಾಣ ಇಲಾಖೆ ಗಮನಕ್ಕೆ ತರಲಾಗಿದೆ.  ಈ  ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಹೇಳಿಕೆಯನ್ನು ಪಡೆದಾಗ, ಹಾಸ್ಟೆಲ್‌ಗೆ ಸಂಬಂಧವೇ ಇಲ್ಲ, ಹೊರಗಿನವರಾದ ಸುರೇಶ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ನಿಂದಿಸಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಕೂಡಲೇ ಎಚ್ಚತ್ತ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೇಶ್ ವಿದ್ಯಾರ್ಥಿಗಳ ಮೇಲ್ಲೆ ಹಲ್ಲೆ ನಡೆಸಿದ ಸುರೇಶ್ ವಿರುದ್ಧ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಾಂಶುಪಾಲರಾದ ಜಯಲಕ್ಷ್ಮೀ ಅವರನ್ನು ಹಾಸ್ಟೆಲ್ ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
