ರಾಮನಗರ:ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು, ಅಲ್ಲಿಂದ ಹಾರಿ ಎದುರಿಗೆ ಬರುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಅವಘಡ ಸಂಭವಿಸಿದೆ.
ರಾಹುಲ್(18), ಅಭಿಷೇಕ್ (21) ಮೃತರು. ಇವರು ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ‌ನಿವಾಸಿಗಳು. ಮತ್ತೊಬ್ಬ ಬೈಕ್ ಸವಾರ ಹರ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ನಿಮಾನ್ಸ್​ಗೆ ರವಾನಿಸಲಾಗಿದೆ.
ಕಾರು ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿತ್ತು. ಬೈಕ್​ ಮೈಸೂರು ಕಡೆಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿತ್ತು. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಾರಿ ಬೈಕ್​ಗೆ ಗುದ್ದಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
