ಬೆಂಗಳೂರು:ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ರಾಮನಗರದ ಬದಲಾಗಿ ಬೆಂಗಳೂರು ದಕ್ಷಿಣ ಎಂದು ನಾಮಾಕರಣ ಮಾಡಲಾಗಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಕನ್ವರ್ ಯಾತ್ರೆ ಆಹಾರ ಮಳಿಗೆಗಳಿಗೆ ಆದೇಶ ವಿವಾದ: ಉತ್ತರ ಪ್ರದೇಶದ ನಡೆಗೆ ಸುಪ್ರೀಂ ಕೋರ್ಟ್ ತಡೆ
ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು, ಅಲ್ಲದೆ, ಬಿಜೆಪಿ ನಾಯಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ರಾಜ್ಯ ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಪಡೆದುಕೊಳ್ಳುವಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

ಸಂಪುಟ ಸಭೆಯ ಬಳಿಕ ಇದೇ ವಿಚಾರವಾಗಿ ಮಾತನಾಡಿದ ಕಾನೂನು ಸಚಿವ ಹೆಚ್‌ಕೆ ಪಾಟೀಲ್, ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಜನರ ಅಪೇಕ್ಷೆಯಂತೆ ಈ ನಿರ್ಣಯ ಕೈಗೊಳ್ಳಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ‌ ಮಾಡಲಾಗಿದೆ ಎಂದು ಹೇಳಿದರು.
ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನ ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ. ಇದು ಚುನಾವಣೆ ದೃಷ್ಟಿಯಿಂದ ಮಾಡಿರೋದಲ್ಲ. ಜನರ ಬೇಡಿಕೆ ಹಿನ್ನಲೆಯಲ್ಲಿ ಮಾಡಿದ್ದು ಅಂತ ಸಚಿವರು ಹೆಚ್.ಕೆ. ಪಾಟೀಲ್ ಸಮರ್ಥನೆ ಮಾಡಿಕೊಂಡರು.
ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ನಿವೃತ್ತಿ ಬೆನ್ನಲ್ಲೇ, ಪತ್ನಿಗೆ ಹುದ್ದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 19 =
Remember me
