ಬೆಳಗಾವಿ:ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಯೋಗ ಇದ್ರೆ ಮುಖ್ಯಮಂತ್ರಿ ಆಗಲಿ ಬಿಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು.
ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಭವಿಷ್ಯ ಮತ್ತು ರಾಜ್ಯದ ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂಬ ಅಭಿಯಾನ ನಡೆಸಿರುವುದು ನನಗಂತೂ ಗೊತ್ತಿಲ್ಲ. ಪಾಪ, ಸವದಿ ಹಣೆಬರಹದಲ್ಲಿ ಮುಖ್ಯಮಂತ್ರಿ ಯೋಗ ಇದ್ದರೆ ಯಾರೂ ತಪ್ಪಿಸಲು ಆಗುವುದಿಲ್ಲ. ಅವರಿಗೆ ಸಿಎಂ ಯೋಗ ಇದ್ರೆ ಆಗಲಿ ಬಿಡಿ ಎಂದು ಸುದ್ದಿಗಾರರ ಬಳಿ ನಕ್ಕರು.
ಇದನ್ನೂ ಓದಿರಿರಾತ್ರಿಯಿಡೀ ಪರದಾಡಿದ ನಟಿ ಸುಧಾರಾಣಿ, ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ; ಡಾ.ಕೆ. ಸುಧಾಕರ್
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಶಾಸಕರನ್ನು ನೇಮಿಸಿದ್ದಾರೆ. ಇದರಿಂದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದು, ದೊಡ್ಡ ಪಕ್ಷದಲ್ಲಿ ಇದೆಲ್ಲ ಸಾಮಾನ್ಯ. ಮುಂದೆ ಈ ಸಮಸ್ಯೆಗಳೆಲ್ಲ ಬಗೆಹರಿಯಲಿವೆ. ಹೈಕಮಾಂಡ್​ ನಿರ್ದೇಶನದಂತೆ ನಿಗಮ-ಮಂಡಳಿ ಅಧ್ಯಕ್ಷರನ್ನು ಸಿಎಂ ನೇಮಿಸಿದ್ದಾರೆ ಎಂದರು.
ನದಿಗಳ ಪ್ರವಾಹ ಮತ್ತು ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚುವರಿ ನೀರು ಬಿಟ್ಟರೆ ಆಗಬಹುದಾದ ಅನಾಹುತ ತಪ್ಪಿಸಬಹುದು. ಇದನ್ನು ಮಹಾರಾಷ್ಟ್ರದ ಜಿಲ್ಲಾಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ತಿಳಿಸಿದರು.
ತಾರಕಕ್ಕೇರಿದೆ ‘ಕುದುರೆ’ ವಿಷ್ಯ; ಜನರಿಂದ ತಿರಸ್ಕರಿಸಲ್ಪಟ್ಟ ಸಿ.ಪಿ.ಯೋಗೇಶ್ವರ್ ‘ಸತ್ತ ಕುದುರೆ’!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 × 2 =
Remember me
