ಬೆಂಗಳೂರು:ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೈವಾಡ ಇದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ವಿಡಿಯೋ ಸ್ಫೋಟಗೊಂಡ ಮರುದಿನವೇ ಗೋಕಾಕ್​ ಸಾಹುಕಾರ್​ ಅವರು ಬಿಎಸ್​ವೈ ಸಚಿವ ಸಂಪುಟದಿಂದ ಔಟ್​ ಆಗಿದ್ದಾರೆ. ಜಾರಕಿಹೊಳಿ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಸ್ವಕ್ಷೇತ್ರ ಗೋಗಾಕ್​ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅವರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಇದೊಂದು ರಾಜಕೀಯ ಷಡ್ಯಂತ್ರ ಎಂದು ಕಿಡಿಕಾರುತ್ತಿದ್ದಾರೆ. ಇಂದು ನಡೆದ ಪ್ರತಿಭಟನೆಯಲ್ಲೂ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಪ್ರಸ್ತಾಪವಾಗಿದ್ದು, ಮತ್ತಷ್ಟು ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ‘ಅವಳು ಒಂದು ಹೆಣ್ಣು, ಈ ವಿಡಿಯೋ ನೋಡಿ ಅವಳಿಗೆ ನೋವು ಆಗಲ್ವಾ?’ ಎಂದು ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.ಇದನ್ನೂ ಓದಿರಿಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ಎಕ್ಸ್​ಕ್ಲೂಸಿವ್ ಮಾಹಿತಿ ಸ್ಫೋಟ
ಇಂದು ಪ್ರತಿಭಟನೆಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಣಿಯ ಶ್ರೀದೇವಿ ತಡಕೋಳ, ರಮೇಶ್​ ಜಾರಕಿಹೊಳಿ ಅವರನ್ನ ಸೋಲಿಸೋಕೆ ಆಗಲ್ಲ ಅಂತ ಹಿಂದಿನ ಬಾಗಿಲಿಂದ ಬಂದು ಈ ಕೈವಾಡ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ ಬಾಳ ಚಂದಾಗಿ ಮಾತಾಡ್ತಾರೆ. ಪ್ರಕರಣದ ತನಿಖೆಯಾದ್ರೆ ಸತ್ಯಾಸತ್ಯತೆ ಹೊರ ಬರುತ್ತೆ. ಅವಳು ಒಂದು ಹೆಣ್ಣು. ಈ ವಿಡಿಯೋ ನೋಡಿ ಅವಳಿಗೆ ನೋವು ಆಗಲ್ವಾ? ಪ್ರತಿಪಕ್ಷದಲ್ಲಿ ಇರಬಹುದು, ಆದ್ರೆ ಈ ವಿಡಿಯೋದಿಂದ ಇಡೀ ಹೆಣ್ಣು ಕುಲಕ್ಕೆ ಅವಮಾನವಾಗಿದೆ ಎಂದು ಆರೋಪಿಸಿದರು. ನಾವು ಯಾವತ್ತಿದ್ದರೂ ರಮೇಶಣ್ಣನ ಜತೆಯಲ್ಲಿ ಇರ್ತೀವಿ. ಅವರು ಮತ್ತೊಮ್ಮೆ ಸಚಿವರಾಗ್ಬೇಕು ಎಂದರು.
ಈ ಆರೋಪ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​, ಸಿಡಿ ವಿಚಾರದಲ್ಲಿ ನಾನೇನು ಮಾತನಾಡಲ್ಲ. ಆ ವಿಚಾರದಲ್ಲಿ ನನ್ನ ಹೆಸರು ಏಕೆ ಎಳೆದು ತರುತ್ತಿದ್ದಾರೆ? ಎಂಬುದು ನಂಗೆ ಗೊತ್ತಿಲ್ಲ. ನಾವು ರಾಜಕಾರಣಿಗಳು ಒಂದು ಮಾದರಿ ಸೆಟ್ ಮಾಡಬೇಕು ಎಂದಷ್ಟೇ ಹೇಳಿದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ಎಕ್ಸ್​ಕ್ಲೂಸಿವ್ ಮಾಹಿತಿ ಸ್ಫೋಟ

ಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!

ಬಿಜೆಪಿ ಶಾಸಕನ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರ! ಹಿಂದು ದೇವರ ಪೋಟೋ ನೋಡಿ ಮನೆ ತೊರೆದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
