ಬೆಂಗಳೂರು:ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾದ ಅಶ್ಲೀಲ ವಿಡಿಯೋ ಸಿಡಿ ಪ್ರಕರಣವನ್ನು ಸರ್ಕಾರ ಎಸ್ಐಟಿಗೆ ವಹಿಸಿದೆ.
ಬುಧವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಗೃಹ ಸಚಿವ ಬಸವರಾಜ‌ ಬೊಮ್ಮಾಯಿ, ಈ ಬಗ್ಗೆ ಚರ್ಚೆ ನಡೆಸಿ ವಿಶೇಷ ತನಿಖಾ ತಂಡ ರಚಿಸಲು ಆದೇಶಿಸಿದರು.
ಈ ಬಗ್ಗೆ ಹೇಳಿಕೆ ನೀಡಿರುವ ಗೃಹ ಸಚಿವ ಬೊಮ್ಮಾಯಿ, ಮಾ.9 ರಂದು ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ನನಗೆ ಪತ್ರ ಬರೆದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಸಲ್ಲಿಕೆಯಾದ ದೂರಿನ ಮೂಲಕ ನನ್ನ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿತ್ತು. ಇದರಲ್ಲಿ ಹಲವಾರು ಜನ ಸೇರಿ ಷಡ್ಯಂತ್ರ ರೂಪಿಸಿರುವಂಥದ್ದು ಬಹಳ ಸ್ಪಷ್ಟವಾಗಿರುತ್ತದೆ ಎಂದು ತಿಳಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕುಷವಾಗಿ ವಿಚಾರಣೆಯನ್ನು ಮಾಡಲು ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ನಿರ್ಧರಿಸಲಾಗಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರು ಇದರ ಹೊಣೆ ಹೊರಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಮಾಡೆಲಿಂಗ್​ ಕನಸಿನೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವತಿ ನೇಣಿಗೆ ಶರಣು! ಸಾವಿನ ಹಿಂದೆ ಗಾಂಜಾ ಮಾಫಿಯಾದ ಕೈ?
ಶೀಘ್ರವೇ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ತಿಳಿಸಿದರು.
ಮಾರ್ಚ್ 2 ರಂದು ದಿನೇಶ್ ಕಲ್ಲಹಳ್ಳಿ ಎನ್ನುವರು, ‘ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಬ್ಬಳಿಗೆ ನೌಕರಿ ಕೊಡಿಸುವುದಾಗಿ ಹೇಳಿ, ಅವಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅವಳಿಗೆ ಮತ್ತು ಅವಳ ಕುಟುಂಬದವರಿಗೆ ಬೆದರಿಕೆ ಹಾಕಲಾಗುತ್ತಿದೆ’ ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗವಾಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿತ್ತು.
ಚುನಾವಣಾ ಸಮಾವೇಶದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ: ನನ್ನ ಮೇಲೆ ಸಂಚು ನಡೆದಿದೆ ಎಂದ ದೀದಿ

ಪ್ಯಾಂಟ್ ಜಾರಿದ್ರೆ ಅವರ ಪ್ಯಾಂಟ್​ನ್ನು ಅವರೇ ಹಾಕಿಕೊಳ್ಳಬೇಕು: ಡಿಕೆಶಿ ಹೀಗಂದಿದ್ದು ಯಾರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + four =
Remember me
