ರಾಮನಗರ:ಸಚಿವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ವಿಡಿಯೋವನ್ನು ರಿಲೀಸ್​ ಮಾಡಿದ್ದ ಹಾಗೂ ಈ ಬಗ್ಗೆ ಬೆಂಗಳೂರಿನ ಕಬ್ಬನ್​ಪಾರ್ಕ್​ ಪೊಲೀಸ್​ ಠಾನೆಯಲ್ಲಿ ದೂರು ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆಯಂತೆ.
ಈ ಬಗ್ಗೆ ಸ್ವತಃ ದಿನೇಶ್​ ಕಲ್ಲಹಳ್ಳಿಯೇ ಹೇಳಿದ್ದಾರೆ. ಕನಕಪುರದಲ್ಲಿ ಮಂಗಳವಾರ  ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ದಿನೇಶ್​ ಕಲ್ಲಹಳ್ಳಿ, ಪ್ರಕರಣ ಬೆಳಕಿಗೆ ಬಂದ ಮೇಲೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿವೆ. ಇಂತಹ ಬೆದರಿಕೆಗೆ ಹೆದರುವುದಿಲ್ಲ. ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ಕೊಡುತ್ತೇನೆ. ನನ್ನ ಜತೆ ಯಾವ ಪ್ರಭಾವಿ ವ್ಯಕ್ತಿಗಳೂ ನಿಂತಿಲ್ಲ ಎಂದರು.
ಸಂತ್ರಸ್ತ ಯುವತಿಯ ಕುಟುಂಬಸ್ಥರು ಪರಿಚಯಸ್ಥರ ಮೂಲಕ ನನ್ನನ್ನು ಭೇಟಿ ಮಾಡಿದರು. ಸಚಿವರಿಂದ ಸಂತ್ರಸ್ತ ಯುವತಿಗೆ ಅನ್ಯಾಯವಾಗಿದೆ. ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ಯುವತಿಯನ್ನ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ನೀವು ಮುಂದೆ ನಿಂತು‌ ನ್ಯಾಯಕೊಡಿಸಬೇಕು ಎಂದು ಕೇಳಿಕೊಂಡರು. ಇದಾದ ಬಳಿಕ ಸಂಪೂರ್ಣವಾಗಿ ಪರಾಮರ್ಶೆ ಮಾಡಿ ವಕೀಲರ ಜತೆ ಚರ್ಚಿಸಿದ ಬಳಿಕ ಪೊಲೀಸ್ ಆಯುಕ್ತರನ್ನ ನಿನ್ನೆ ಭೇಟಿ ಮಾಡಿ ದೂರು ಕೊಟ್ಟಿದ್ದೇನೆ ಎಂದರು.
ದೂರಿನ ಜತೆಗೆ ಸಂಬಂಧಟ್ಟ ಮಾಹಿತಿಯನ್ನು ಕೊಟ್ಟಿದ್ದೇನೆ. ನಕಲಿ‌ ಸಿಡಿ‌ ಎಂಬ ಮಾತೂ ಕೇಳಿಬರುತ್ತಿದೆ. ಆದಷ್ಟು ಬೇಗ ಈ ಕುರಿತು ತನಿಖೆ ನಡೆಯಲಿ, ಸತ್ಯಾಸತ್ಯತೆ ಹೊರಬರಲಿ ಎಂದರು. ಪ್ರಧಾನಿಮಂತ್ರಿಗಳನ್ನು ಭೇಟಿ ಮಾಡಲು ಅವಕಾಶ ಕೋರುತ್ತೇನೆ ಎಂದರು. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗೋವರೆಗೂ ಹೋರಾಟ ಮಾಡುತ್ತೇನೆ. ನನ್ನಜತೆ ಯಾವ ಪ್ರಭಾವಿಗಳೂ ಇಲ್ಲ ಎಂದರು.
ಕರ್ನಾಟಕ ಭವನದಲ್ಲೇ ಸಚಿವರ ಕಾಮದಾಟ! ರಮೇಶ್​ ಜಾರಕಿಹೊಳಿಗೆ ಖೆಡ್ಡಾ ತೋಡಿದ್ದು ಕೈ ಮುಖಂಡ?

ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?

ಕಾಲೇಜು ಕಟ್ಟಡದಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ! ಡೆತ್​ನೋಟ್​ ಪತ್ತೆ, ಸಹಪಾಠಿಗಳ ಪ್ರತಿಭಟನೆ

ಮೊದಲ ರಾತ್ರಿಯೇ ಮದುಮಗಳ ದುರಂತ ಸಾವು! ಮದ್ವೆ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 11 =
Remember me
