ಮೈಸೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್‌ಐಟಿಗೆ ವಹಿಸಿರುವ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ, ಇದು ತಿಪ್ಪೆ ಸಾರಿಸುವ ಕೆಲಸ ಎಂದು ಟೀಕಿಸಿದರು.
ಯಾವ ತನಿಖೆಯೂ ಆಗಲ್ಲ. ಯಾರಿಗೂ ಶಿಕ್ಷೆಯೂ ಆಗಲ್ಲ ಎಂದು ಮಾಜಿ ಸಿಎಂ ಎಚ್​ಡಿಕೆ ಭವಿಷ್ಯ ನುಡಿದರು. ಎಸ್‌ಐಟಿ ತನಿಖೆ ಮಾಡ್ತೀವಿ ಅಂತಾರೆ. ಆದರೆ, ಯಾರ ವಿರುದ್ಧ ತನಿಖೆ ಮಾಡ್ತಾರೆ? ಏನಂತ ತನಿಖೆ ಮಾಡ್ತಾರೆ? ಯಾವ ವಿಚಾರಗಳ ಆಧಾರದ ಮೇಲೆ ತನಿಖೆಗೆ ಆದೇಶ ಮಾಡ್ತಾರೆ? ಎಂದು ಪ್ರಶ್ನಿಸಿದರು.
ಇದನ್ನೂ ಓದಿರಿ:Roberrt Twitter Review: ದರ್ಶನ್​ ಅಭಿನಯದ ರಾಬರ್ಟ್​ ಚಿತ್ರದ ಟ್ವಿಟರ್​ ವಿಮರ್ಶೆ ಹೀಗಿದೆ…
ಎಫ್‌ಎಸ್‌ಎಲ್ ರಿಪೋರ್ಟ್‌ನಲ್ಲಿ ನಕಲಿ ಅಂತ ಬರಬಹುದು. ಈ ಹಿಂದೆಯೂ ಇಂತಹ ಅದೆಷ್ಟೋ ತನಿಖಾ ವರದಿಗಳು ಮೂಲೆ ಗುಂಪಾಗಿವೆ. ಮೇಟಿ ಪ್ರಕರಣದಲ್ಲೂ ಕ್ಲೀನ್ ಚಿಟ್ ಆಯ್ತು. ಇಂತಹ ಪ್ರಕರಣಗಳನ್ನು ನೈತಿಕವಾಗಿ ಎದುರಿಸಬೇಕು ಎಂದರು.
ನಮ್ಮ ಕುಟುಂಬಕ್ಕೂ ಇಂತಹ ಹಲವಾರು ವಿಚಾರಗಳು ಬಂದಿವೆ. ಆದರೆ ಇಂತಹ ವಿಚಾರಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಅಂತ ಹೇಳಿ ಕಳುಹಿಸಿದ್ದೇವೆ ಎಂದು ಎಚ್​ಡಿಕೆ ತಿಳಿಸಿದರು.(ದಿಗ್ವಿಜಯ ನ್ಯೂಸ್​)
ಮಹಿಳೆ ಮನೆಯಲ್ಲಿ ಹಲ್ಲಿ ಓಡಿಸಲು ಹೋದ ಇನ್ಸ್​ಪೆಕ್ಟರ್​ ದುರಂತ ಸಾವು: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ!

ಆಸ್ಪತ್ರೆಯಲ್ಲಿ ದೀದಿ : ಕಾಲಿಗೆ ಫ್ರಾಕ್ಚರ್, ಭುಜಕ್ಕೆ ಮೂಗೇಟು

ಪಾಕ್​ಗೆ ಮೇಡ್ ಇನ್ ಇಂಡಿಯಾ ಕರೊನಾ ಲಸಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 13 =
Remember me
