ಬೆಳಗಾವಿ:ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಹುಕರ್​ನ ಸ್ವಕ್ಷೇತ್ರದಲ್ಲಿ ಆಕ್ರೋಶ ಭುಗಿಲೆದ್ದಿದೆ. ಅಯ್ಯೋಯ್ಯೋ ಅನ್ಯಾಯ… ಎಂದು ಕೂಗಾಡುತ್ತ ಬಸವೇಶ್ವರ ವೃತ್ತದಲ್ಲಿ ಹೈಡ್ರಾಮ ಮಾಡಿದ ರಮೇಶ್​ ಜಾರಕಿಹೊಳಿ ಬೆಂಬಲಿಗರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಪ್ರತಿಭಟನೆ ಮಾಡಿದ್ದಾರೆ.
ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿತ್ತು. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು. ಹಲವೆಡೆ ಕಾಂಗ್ರೆಸ್​-ಜೆಡಿಎಸ್​ ಕಾರ್ಯಕರ್ತರು ಪ್ರತ್ಯೇಕವಾಗಿ ಬೀದಿಗಿಳಿದು ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಸಚಿವ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಇತ್ತ ನಾನು ಯಾವ ತಪ್ಪನ್ನೂ ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದು ಜಾರಕಿಹೊಳಿ ಹೇಳಿದ್ದರು. ಈ ಎಲ್ಲ ಬೆಳವಣಿಗೆ ನಡುವೆ ರಾಜೀನಾಮೆ ಪಡೆಯಬೇಕೆಂದು ಸಿಎಂ ಯಡಿಯೂರಪ್ಪಗೆ ಪಕ್ಷದ ಹೈಕಮಾಂಡ್​ ಸೂಚಿಸಿತ್ತು. ಇದರ ಬೆನ್ನಲ್ಲೇ ರಮೇಶ್​ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಇದನ್ನೂ ಓದಿರಿಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದಲ್ಲಿ ಬಂಡಾಯ ಕೈವಾಡ? ಶಿವರಾಮ್​ ಹೆಬ್ಬಾರ್​ ಹೇಳಿದ್ದೇನು?
ಗೋಕಾಕ್​ನ ಸಾಹುಕಾರ್​ ರಾಜೀನಾಮೆ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ಡಿಆರ್ ವ್ಯಾನ್ ಮುಂದೆ ನಿಂತು ವಾಹನ ಹೋಗೋಕೂ ಬಿಡದೆ ಹೈಡ್ರಾಮ ಮಾಡಿದರು. ಬೆಂಬಲಿಗರು ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಪ್ರತಿಭಟನೆಗೆ ಕುಳಿತರು. ಈ ವೇಳೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆದರು. ಟೈಯರ್​ಗೆ ಬೆಂಕಿ ಇಟ್ಟು ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕಾರ ಮಾಡಬಾರದು ಎಂದು ಯಡಿಯೂರಪ್ಪರನ್ನ ಆಗ್ರಹಿಸಿದರು.
ಸಚಿವ ಸ್ಥಾನಕ್ಕೆ ರಮೇಶ್ ರಾಜೀನಾಮೆ ಬೆನ್ನಲ್ಲೇ ಗೋಕಾಕ್​ ಪಟ್ಟಣ ಬಂದ್ ಮಾಡಲು ಜಾರಕಿಹೊಳಿ ಬೆಂಬಲಿಗರು ಮುಂದಾಗಿದ್ದು, ಗೋಕಾಕ್​ನ ಬೀದಿ ಬೀದಿಗಳಲ್ಲಿ ತಿರುಗಾಡಿ ಅಂಗಡಿ ಬಂದ್ ಮಾಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಸೆಕ್ಸ್​ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಜಾರಕಿಹೊಳಿ, ಷರತ್ತುಗಳು ಅನ್ವಯ!

ಕರ್ನಾಟಕ ಭವನದಲ್ಲೇ ಸಚಿವರ ಕಾಮದಾಟ! ರಮೇಶ್​ ಜಾರಕಿಹೊಳಿಗೆ ಖೆಡ್ಡಾ ತೋಡಿದ್ದು ಕೈ ಮುಖಂಡ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four + thirteen =
Remember me
