ಬೆಂಗಳೂರು:ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ನಾನು ಯಾವ ತಪ್ಪನ್ನು ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದಿದ್ದ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಬುಧವಾರ ರಾಜೀನಾಮೆ ನೀಡಿದ್ದಾರೆ.
ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು.ಇದನ್ನೂ ಓದಿರಿಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದಲ್ಲಿ ಬಂಡಾಯ ಕೈವಾಡ? ಶಿವರಾಮ್​ ಹೆಬ್ಬಾರ್​ ಹೇಳಿದ್ದೇನು?
ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಜಾರಕಿಹೊಳಿಯಿಂದ ಈ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿಪಕ್ಷದ ನಾಯಕರು ಆಗ್ರಹಿಸಿದ್ದರು. ಅಲ್ಲದೆ ರಾಜ್ಯದ ಹಲವೆಡೆ ಕಾಂಗ್ರೆಸ್​-ಜೆಡಿಎಸ್​ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದವು. ಈ ಪ್ರಕರಣ ಸ್ವಪಕ್ಷಕ್ಕೆ ಭಾರಿ ಮುಜುಗರ ಉಂಟಾಗುವುದನ್ನ ತಪ್ಪಿಸಲು ರಮೇಶ್​ ಜಾರಕಿಹೊಳಿ ತಲೆದಂಡವಾಗಿದೆ.
ಪಕ್ಷಕ್ಕೆ ಮುಜುಗರ ತಪ್ಪಿಸಲು ಇಂದು ಸಂಜೆಯೊಳಗೆ ಸಚಿವರ ರಾಜೀನಾಮೆ ಪಡೆಯುವಂತೆ ಹೈಕಮಾಂಡ್​ ಸೂಚನೆ ನೀಡಿತ್ತು. ವರಿಷ್ಠರ ಸೂಚನೆಯನ್ನು ಸಚಿವ ಬಸವರಾಜ ಬೊಮ್ಮಾಯಿ ಮೂಲಕ ರಮೇಶ್ ಜಾರಕಿಹೊಳಿಗೆ ಸಿಎಂ ಬಿಎಸ್ ವೈ ತಲುಪಿಸಿದ್ದರು. ಇದಕ್ಕೆ ಸಮ್ಮತಿ ಸೂಚಿಸಿದ ರಮೇಶ್ ಜಾರಕಿಹೊಳಿ, ಸಿಎಂ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಅಲ್ಲದೆ ನಾನು ನಿರ್ದೋಷಿಯಾಗಿ ಬಂದ ಬಳಿಕ ನನಗೆ ಸಚಿವ ಸ್ಥಾನ ಕೊಡಬೇಕು ಹಾಗೂ ಸದ್ಯ ಜಲಸಂಪನ್ಮೂಲ ಖಾತೆಯನ್ನು ನನ್ನ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಕೊಡಬೇಕು ಎಂದು ರಾಜೀನಾಮೆ ಪತ್ರದಲ್ಲಿ ರಮೇಶ್​ ಜಾರಕಿಹೊಳಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ರಮೇಶ್​ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ: ಚಡ್ಡಿ ಪ್ರದರ್ಶಿಸಿ ಪ್ರತಿಭಟನೆ

ಕರ್ನಾಟಕ ಭವನದಲ್ಲೇ ಸಚಿವರ ಕಾಮದಾಟ! ರಮೇಶ್​ ಜಾರಕಿಹೊಳಿಗೆ ಖೆಡ್ಡಾ ತೋಡಿದ್ದು ಕೈ ಮುಖಂಡ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − five =
Remember me
