ಬೆಳಗಾವಿ:ಸಿಡಿ ಕೇಸ್​ನಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿಗೆ, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಇನ್ನೂ ಅವಕಾಶ ಸಿಕ್ಕಿಲ್ಲ. ಇದರಿಂದ ಬೇಸರಗೊಂಡಿರುವ ರಮೇಶ್​ ಜಾರಕಿಹೊಳಿ ಅವರ ಮುಂದಿನ ನಡೆ ಕುರಿತು ಅಂತೆ-ಕಂತೆ ಹರಿದಾಡುತ್ತಿದೆ. ಆದರೆ ಈ ಕುರಿತು ಸ್ವತಃ ಜಾರಕಿಹೊಳಿ ಅವರೇ ಪ್ರತಿಕ್ರಿಯಿಸಿದ್ದು, ನನಗೆ ಸುಳ್ಳು ಹೇಳುವ ಚಟವಿಲ್ಲ ಎಂದಿದ್ದಾರೆ.
ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ಶನಿವಾರ ಮಾತನಾಡಿದ ರಮೇಶ್​ ಜಾರಕಿಹೊಳಿ, ನನ್ನ ಮನಸ್ಸಿಗೆ ಬೇಸರವಾಗಿರುವುದರಿಂದ ಕಳೆದೊಂದು ವರ್ಷದಿಂದ ಮಾಧ್ಯಮದವರಿಂದ ದೂರ ಇದ್ದೆ. ಆದರೆ, ಅನಿವಾರ್ಯವಾಗಿ ಈಗ ವಿಷಯ ಸ್ಪಷ್ಟಪಡಿಸುತ್ತಿದ್ದೇನೆ. ನನಗೆ ಸುಳ್ಳು ಹೇಳುವ ಚಟವಿಲ್ಲ. ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನನ್ನ ಜತೆ ಫೋನ್​ ಸಂಪರ್ಕದಲ್ಲಿದ್ದಾರೆ. ಆದರೆ, ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದರು.
2023ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ಆ ಸಂದರ್ಭದಲ್ಲಿ ಪಕ್ಷದ ಹತ್ತು ಪ್ರಮುಖರಲ್ಲಿ ನಾನು ಒಬ್ಬ ಆಗುತ್ತೇನೆ. ಉನ್ನತ ಹುದ್ದೆಗೆ ಹೋಗಿ ಸೇವೆ ಮಾಡುತ್ತೇನೆ. 2023ರ ವಿಧಾನಸಭೆ, 2024ರ ಲೋಕಸಭೆ ಚುನಾವಣೆಯಲ್ಲೂ ಪಕ್ಷದ ಪ್ರಮುಖ ಮುಖಂಡನಾಗಿ ಕೆಲಸ ಮಾಡುತ್ತೇನೆ ಎಂದರು.
ಮಾಲೂರಿಗೆ ಬಂದ ಪಂಚರತ್ನ ರಥಯಾತ್ರೆ: ದಾರಿಯುದ್ದಕ್ಕೂ ಎಚ್​ಡಿಕೆ ಅದ್ದೂರಿ ಸ್ವಾಗತ, ಜೆಡಿಎಸ್​ ಶಕ್ತಿ ಪ್ರದರ್ಶನ

ಮಂಗಳೂರಿನಲ್ಲಿ ಆಟೋ ಸ್ಫೋಟ: ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಅನುಮಾನ ಹುಟ್ಟಿಸಿದೆ ಪಂಪ್‌ವೆಲ್​ಗೆ ಪ್ರಯಾಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
