ವಿಜಯಪುರ:‘ಮಹೇಶ ಕುಮಟಳ್ಳಿಗೆ ಟಿಕೆಟ್ ನೀಡದೇ ಹೋದರೆ ನಾನೂ ಗೋಕಾಕ್​ನಿಂದ ನಿಲ್ಲುವುದಿಲ್ಲ’ ಎಂದು ಶಾಸಕ ರಮೇಶ್​ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ.
ವಿಜಯ ಸಂಕಲ್ಪ ಯಾತ್ರೆ ಹಿನ್ನೆಲೆ ಶುಕ್ರವಾರ ವಿಜಯಪುರ ನಗರಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದ್ದು ಈ ಬಾರಿ ಇನ್ನೂ ಎರಡು ಸ್ಥಾನ ಹೆಚ್ಚಿಗೆ ಗೆಲ್ಲಿಸುವ ಪ್ರಯತ್ನ ಮಾಡುವೆ ಎಂದರು.
ತಮ್ಮೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದವರಿಗೆ ಟಿಕೆಟ್ ಅನುಮಾನ ಎನ್ನಲಾಗುತ್ತಿದ್ದು, ಇದರಲ್ಲಿ ಮಹೇಶ ಕುಮಟಳ್ಳಿ ಕೂಡ ಒಬ್ಬರು ಎಂಬ ಮಾತು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಕುಮಟಳ್ಳಿಗೆ ಟಿಕೆಟ್ ನೀಡದೇ ಹೋದರೆ ತಾವು ಸಹ ‌ನಿಲ್ಲಲ್ಲ ಎಂದರು.
ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಮೇಶ ಜಾರಕಿಹೊಳಿ, ‘ಕಾಂಗ್ರೆಸ್ ಮುಳುಗುವ ಹಡಗು. ಈಗ ಹೋಗಿ ಏನು ಮಾಡುವುದು. ಬಿಜೆಪಿ ತತ್ವ ಸಿದ್ದಾಂತ ನಂಬಿ ಕಾಂಗ್ರೆಸ್ ಬಿಟ್ಟು ಬಂದಿದ್ದೇನೆ. ಬಿಜೆಪಿ ದೊಡ್ಡ ಪ್ರವಾಹ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯನ್ನು ಕೊಂಡಾಡುತ್ತಿದ್ದಾರೆ’ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 2 =
Remember me
