ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸೆಕ್ಸ್ ವಿಡಿಯೋ ಸಿಡಿ ಬಹಿರಂಗವಾಗಿ ತೀವ್ರ ಸಂಚಲನ ಸೃಷ್ಟಿಸಿದೆ.
ಯುವತಿಯೊಬ್ಬಳ ಜೊತೆ ಹೋಟೆಲ್ ಕೋಣೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಎನ್ನಲಾದ ವ್ಯಕ್ತಿಯೊಬ್ಬರು ಅಶ್ಲೀಲ ಭಂಗಿಯಲ್ಲಿ ಕಾಣಿಸಿಕೊಂಡಿದ್ದಲ್ಲದೇ ಸಂಭೋಗ ಮಾಡುತ್ತಿರುವ ದೃಶ್ಯ ಸಿಡಿಯಲ್ಲಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎನ್ನುವರು ವಿಡಿಯೋ ಬಹಿರಂಗಗೊಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ‌ ರಾಜೀನಾಮೆ ನೀಡುತ್ತಾರಾ? ಎನ್ನುವ ಪ್ರಶ್ನೆ ಇದೀಗ ಎದ್ದಿದೆ.
ಬಿಜೆಪಿ ಮೂಲಗಳ ಪ್ರಕಾರ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸಿಎಂ ಬಿಎಸ್ ವೈ, ರಮೇಶ್ ಜಾರಕಿಹೊಳಿ‌ ರಾಜೀನಾಮೆ ಕೇಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಅಧಿವೇಶನಕ್ಕೂ ಮುನ್ನಾ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬಿಜೆಪಿಯಲ್ಲೂ ರಮೇಶ್ ಜಾರಕಿಹೊಳಿ ರಾಜೀನಾಮೆಗೂ ಒತ್ತಡ ಹಾಕುತ್ತಿದ್ದಾರೆ. ಪಕ್ಷ ಮುಜುಗರಕ್ಕೆ ಸಿಲುಕಲಿರುವ ಹಿನ್ನಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತವಾಗಿದಿಯಂತೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮೇಟಿ ರಾಸಲೀಲೆ ಪ್ರಕರಣ ಬೆಳಕಿಗೆ ಬಂದಿತ್ತು. ಬಿಜೆಪಿ ಒತ್ತಡಕ್ಕೆ ಮೇಟಿ ರಾಜೀನಾಮೆ ನೀಡಿದ್ದರು. ಈಗ ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಒತ್ತಡದಲ್ಲಿ ಬಿಜೆಪಿ ಇದೆ. ಸದನದಲ್ಲಿ ರಮೇಶ್ ಜಾರಕಿಹೊಳಿ‌ ರಾಜೀನಾಮೆಗೆ ಒತ್ತಾಯಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಇನ್ನೊಂದೆಡೆ ಸಿಡಿ ವಿಚಾರ ಬಹಿರಂಗವಾಗಿರುವುದರಿಂದ ರಮೇಶ್ ಜಾರಕಿಹೊಳಿ ಅಜ್ಞಾತರಾಗಿರುವುದು ಗೊತ್ತಾಗಿದೆ.
ರಮೇಶ್​ ಜಾರಕಿಹೊಳಿ ರಾಸಲೀಲೆ ವಿಡಿಯೋ ವೈರಲ್: ಕೆಲಸ ಕೇಳಿಕೊಂಡು ಬಂದವಳ ಜತೆ ಸಲ್ಲಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − three =
Remember me
