ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳುವುದಾಗಿ ಹೇಳಿದ ಬಳಿಕ ಶಾಸಕರು ಸಚಿವ ಪದವಿಗೆ ಬೇಡಿಕೆಯಿಟ್ಟರೆ, ಉಪ ಮುಖ್ಯಮಂತ್ರಿ ಹುದ್ದೆಗೆ ಬಡ್ತಿ ಪಡೆಯುವ ಧಾವಂತದಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇದ್ದಂತಿದೆ. ಸಿಎಂ ಅಧಿಕೃತ ನಿವಾಸ ’ ಕಾವೇರಿ’ಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಂಗಳವಾರ 15 ನಿಮಿಷಗಳಿಗೂ ಹೆಚ್ಚು ಕಾಲ ರ್ಚಚಿಸಿರುವುದು ಪುಷ್ಟಿ ನೀಡಿದೆ.
ಡಿಸಿಎಂ ಆಗಲೇಬೇಕೆಂದು ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದಲ್ಲದೆ, ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮೂಲಕವೂ ಹೇಳಿಸಿಯಾಗಿದೆ. ಮತ್ತೊಮ್ಮೆ ಬಿಎಸ್ ವೈ ಮುಂದೆ ಈ ಬೇಡಿಕೆಯಿಡಲು ಭೇಟಿಯಾಗಿದ್ದರು. ಅಲ್ಲದೆ, ಆಪ್ತರಾದ ಎಚ್.ವಿಶ್ವನಾಥ್, ಸಿ ಪಿ.ಯೋಗೇಶ್ವರ ಪರವಾಗಿ ವಕಾಲತ್ತು ನಡೆಸಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕರೊನಾ ಪರೀಕ್ಷೆ ಮಾಡಿಸಿಕೊಳ್ಳಲು ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತಾರಂತೆ!
ಪ್ರತಾಪಗೌಡರಿಗೆ ಒತ್ತಾಸೆ: ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಕ್ಷೇತ್ರದ ಉಪ ಚುನಾವಣೆಯ ಹಾದಿ ಸುಗಮವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಾಪ ಗೌಡ ಪಾಟೀಲ್​ರಿಗೆ ಪಕ್ಷದ ಟಿಕೆಟ್ ಖಾತರಿಪಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ ಎನ್ನಲಾಗಿದೆ.
‘ಚಂದಮಾಮ’ದ ವಿಕ್ರಂ-ಬೇತಾಳ ಚಿತ್ರ ರಚಿಸುತ್ತಿದ್ದ ಕಲಾವಿದ ಶಿವಶಂಕರನ್ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 6 =
Remember me
