ಕೋಲಾರ:ಕಾಂಗ್ರೆಸ್​ನ ಹಿರಿಯ ರಾಜಕಾರಣಿ ಕೆ.ಆರ್​.ರಮೇಶ್​ಕುಮಾರ್​ ಅವರು ‘ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಸಕ್ರಿಯ ರಾಜಕಾರಣದಿಂದ ಗೌರವಯುತವಾಗಿ ನಿವೃತ್ತಿ ಪಡೆಯುವೆ’ ಎಂದು ಘೋಷಿಸಿದ್ದಾರೆ.
ಗ್ರಾಪಂ ಚುನಾವಣೆ ಸಂಬಂಧ ನಗರ ಹೊರವಲಯದಲ್ಲಿ ಕಾಂಗ್ರೆಸ್ ಶಾಸಕ ರಮೇಶ್​ ಕುಮಾರ್​ ನೇತೃತ್ವದಲ್ಲಿ ಸೋಮವಾರ ಕಾರ್ಯಕರ್ತರ ಸಭೆ ನಡೆಯಿತು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಮೇಶ್​ಕುಮಾರ್​, ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ನಾನು ನೇರವಾಗಿ ಮಾತನಾಡುತ್ತೇನೆ. ಯಾರಿಂದಲೂ ದುಡ್ಡು ತೆಗೆದುಕೊಳ್ಳುವುದಿಲ್ಲ. ನನ್ನ ಈ ನಡೆಯೇ ವಿರೋಧಿಗಳ ಕೋಪಕ್ಕೆ ಕಾರಣ. ಅದಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. ಕಾಂಗ್ರೆಸ್​ನಲ್ಲಿದ್ದ ಕೆಲವರು ಹಣಕ್ಕಾಗಿ ತಮ್ಮ ತಲೆ ಮಾರಿಕೊಂಡು ಹೋದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.
ಜನರಿಂದ ಆಯ್ಕೆಯಾದ ನಾನು ಜನರಿಗಷ್ಟೇ ತಲೆ ಬಾಗುವೆ ಎಂದ ರಮೇಶ್​ ಕುಮಾರ್​, ದೇಶದಲ್ಲಿ ಕಾಂಗ್ರೆಸ್​ ಸಂಕಷ್ಟದಲ್ಲಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯಕರ್ತರು ಎದೆಗುಂದಬಾರದು. ಯಾರೊಬ್ಬರೂ ಪಕ್ಷಕ್ಕೆ ದ್ರೋಹ ಮಾಡಬಾರದು. ಕಾರ್ಯಕರ್ತರಲ್ಲಿ ಸಣ್ಣ ವ್ಯತ್ಯಾಸವಾದರೂ ಪಕ್ಷದ ಜತೆಗೆ ನಾವೂ ನಾಶವಾಗುತ್ತೇವೆ. ಸಣ್ಣ-ಪುಟ್ಟ ಮನಸ್ತಾಪವನ್ನು ದೊಡ್ಡದು ಮಾಡಿ ವಿರೊಧಿಗಳ ಜತೆಗೆ ಕೈಜೋಡಿಸುವ ಹಂತಕ್ಕೆ ಯಾವುದೇ ಕಾರಣಕ್ಕೂ ಹೋಗಬೇಡಿ ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಪ್ರಗತಿ ಕುಂಠಿತಗೊಂಡಿದೆ. ಎತ್ತಿನ ಹೊಳೆ ಯೋಜನೆ ಕಾಮಗಾರಿ ಮುಂದೆ ಹೋಗಿಲ್ಲ. ಇಷ್ಟೊತ್ತಿಗಾಗಲೇ ಕೆ.ಸಿ.ವ್ಯಾಲಿ ಯೋಜನೆಯಿಂದ ಜಿಲ್ಲೆಯ ಹಲವು ಕೆರೆಗಳು ತುಂಬಬೇಕಿತ್ತು. ಆದರೆ ನರೀಕ್ಷಿತ ಪ್ರಮಾಣದಲ್ಲಿ ನೀರು ಬರುತ್ತಿಲ್ಲ. ನೀರಿನ ಹರಿವು ಹೆಚ್ಚಿಸುವಂತೆ ಸರ್ಕಾರದ ಮೇಲೆ ಜಿಲ್ಲೆಯ ಜನಪ್ರತಿನಿಧಿಗಳು ಒತ್ತಡ ಹಾಕುತ್ತಿಲ್ಲ ಎಂದರು.
ಇನ್ಮುಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ರಮೇಶ್​ ಕುಮಾರ್​, ಪಕ್ಷದ ಋಣ ತೀರಿಸಲು ಮತ್ತು ಗ್ರಾಮ ಮಟ್ಟದಲ್ಲಿ ಕಾಂಗ್ರೆಸ್​ ಅನ್ನು ಅಧಿಕಾರಕ್ಕೆ ತರಲು ಗ್ರಾಮ ಪಂಚಾಯಿತಿ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿದ್ದೇನೆ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು ಎಂದು ಕರೆ ನೀಡಿದರು.
ನಮ್ಮ ದೇವರಿಗೆ ನಮಸ್ತೆ… ಅಂದ ಮುನಿರತ್ನ! ವಿಧಾನಸೌಧದಲ್ಲಿ ಗುರು-ಶಿಷ್ಯ ಮುಖಾಮುಖಿ ಮಾತುಕತೆ

ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − twelve =
Remember me
