ಬೆಂಗಳೂರು:ಶುಕ್ರವಾರ (ಮಾ.01) ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ್ದ ನಿಗೂಢ ವಸ್ತು ಸ್ಫೋಟ ಪ್ರಕರಣಕ್ಕೆ ಇದೀಗ ಹಲವು ತಿರುವು ಪಡೆದುಕೊಳ್ಳುತ್ತಿದ್ದು, ಅದು ಬಾಂಬ್​ ಸ್ಫೋಟ ಎಂದು ಡಿಜಿಪಿ ಅಲೋಕ್​ ಮೋಹನ್ ನಿನ್ನೆ​ ತಿಳಿಸಿದರು. ಈ ಬೆನ್ನಲ್ಲೇ ಬೆಂಗಳೂರು ಪೊಲೀಸರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೈಅಲರ್ಟ್​ ಮಾಡಿದ್ದು, ಬಿಎಂಟಿಸಿ ಬಸ್​ಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ.
ಇದನ್ನೂ ಓದಿ:ಮದುವೆಗೂ ಮುನ್ನ ಆರೋಗ್ಯ ಸಮಸ್ಯೆ ತೋಡಿಕೊಂಡ ಅನಂತ್​; ಮಗನ ಮಾತಿಗೆ ಕಣ್ಣೀರಿಟ್ಟ ಮುಖೇಶ್ ಅಂಬಾನಿ
ಇಂದು ಬೆಳಗ್ಗೆ ಮುಖಕ್ಕೆ ಮಾಸ್ಕ್​ ಧರಿಸಿ, ಟೋಪಿ ಧರಿಸುವ ಅನುಮಾನಸ್ಪದ ವ್ಯಕ್ತಿಯೊಬ್ಬ ಘಟನೆಯ ಸುತ್ತಮುತ್ತ ಹೋಗಿರುವುದು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಈ ಛಾಯಚಿತ್ರವು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಶಂಕಿತ ವ್ಯಕ್ತಿಯ ಹಿನ್ನೆಲೆ, ಆತ ಎಲ್ಲೆಲ್ಲಿ ಸಂಚರಿಸಿದ್ದಾನೆ ಎಂಬುದರ ಸಂಪೂರ್ಣ ಮಾಹಿತಿ ಕಲೆಹಾಕುವಲ್ಲಿ ತನಿಖಾ ತಂಡ ನಿರತವಾಗಿದೆ.
ಇದೀಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಹಲವು ನಗರ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದ್ದು, ಬಾಂಬ್​ ಪ್ರಕರಣಕ್ಕೆ ಸಂಬಂಧಿಸಿದ ಶಂಕಿತ, ಬಿಎಂಟಿಸಿಯ ವೋಲ್ವೋ ಬಸ್​ನಲ್ಲಿ ಪ್ರಯಾಣಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವರದಿಯ ಹಿನ್ನೆಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ, ಬಿಎಂಟಿಸಿ ಬಸ್​ಗಳ ಮೇಲೆ ವಿಶೇಷ ನಿಗಾವಹಿಸಿದೆ.
ಇದನ್ನೂ ಓದಿ:64 ರೂಪಾಯಿಯ ಷೇರು 90ಕ್ಕೆ ತಲುಪಲಿದೆ: ಹೀಗೆಂದು ಬ್ರೋಕರೇಜ್​ ಸಂಸ್ಥೆ ಹೇಳಿದ್ದೇಕೆ?
ಬಿಎಂಟಿಸಿ ಬಸ್​ನಲ್ಲಿ ಅನುಮಾನಸ್ಪದ ವಸ್ತು ಕಂಡುಬಂದರೆ ಮಾಹಿತಿ ಕೊಡಿ. ಕೂಡಲೇ ಬಸ್​ನ ಚಾಲಕ ಅಥವಾ ನಿರ್ವಾಹಕರ ಗಮನಕ್ಕೆ ತರಬೇಕು ಎಂದು ಬೆಂಗಳೂರು ಸಾರಿಗೆ ಇಲಾಖೆಯ ಎಂಡಿ ಆರ್. ರಾಮಚಂದ್ರನ್ ತಿಳಿಸಿದ್ದಾರೆ. ಶಂಕಿತ ಆರೋಪಿ ಬಿಎಂಟಿಸಿ ವೋಲ್ವೋ ಬಸ್​ನಲ್ಲಿ ಪ್ರಯಾಣಿಸಿದ್ದ. ರೂಟ್​ ನಂಬರ್ 500ಸಿ ಬಸ್ಸಿನಲ್ಲಿ ಓಡಾಡಿದ್ದಾನೆ ಎಂದು ಮಾಹಿತಿ ದೊರಕಿದೆ.
‘ಗೊಂದಲ, ಹೋರಾಟ, ಪ್ರಯತ್ನ’….: ವಿಚ್ಛೇದನ ನೆನೆದು ಸಾನಿಯಾ ಭಾವುಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 9 =
Remember me
