ಬೆಂಗಳೂರು:ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್​ನ ಫೋಟೋ ಲಭ್ಯವಾಗಿದೆ.
ಶಂಕಿತ ಬಾಂಬರ್ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್​ ಕ್ಯಾಪ್​ ಧರಿಸಿ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ರಾಮೇಶ್ವರಂ ಕೆಫೆಗೆ ಎಂಟ್ರಿ ಕೊಡುತ್ತಿರುವುದನ್ನು ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಘಟನೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಕಾನೂನು ಬಾಹಿರ ಚಟುವಟಿಕೆ ಕಾಯ್ದೆ (UAPA) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
VIDEO | Bengaluru cafe blast suspect caught on CCTV.At least 10 people were injured in a low intensity bomb blast at the popular Rameshwaram Cafe in Bengaluru's Whitefield locality on Friday. Police suspect that an improvised explosive device (IED) fitted with a timer inside a…pic.twitter.com/EWGzLAmy1M
ಟೋಕನ್ ತೆಗೆದುಕೊಂಡ ಶಂಕಿತ ರವೆ ಇಡ್ಲಿ ತಿಂದು ಹ್ಯಾಂಡ್ ವಾಶಿಂಗ್‌ಗೆ ಹೋಗಿದ್ದಾನೆ. ಹ್ಯಾಂಡ್ ವಾಶ್ ಮಾಡಿ ಬ್ಯಾಗ್ ಅಲ್ಲೇ ಇಟ್ಟು ಬೈಕ್‌ನಲ್ಲಿ ತೆರಳಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಬಾಂಬ್​ ಸ್ಫೋಟವಾಗಿದೆ. ಹೋಗುತ್ತಾ ವಾಚ್​ನಲ್ಲಿ ಟೈಂ ನೋಡಿ ಹೋಗಿದ್ದು ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಶಂಕಿತ ಆರೋಪಿಯ ಚಲನವಲನ ಸೆರೆಯಾಗಿರುವ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ.
ಶಂಕಿತ ಬಾಂಬರ್​ಗಾಗಿ ತೀವ್ರ ಹುಡುಕಾಟ ನಡೆಸುತ್ತಿರುವ ಪೊಲೀಸರು ಆತನನ್ನು ಪತ್ತೆ ಹಚ್ಚಲು ಎಂಟು ತಂಡಗಳನ್ನು ರಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿರು ಗುಪ್ತಚರ ಇಲಾಖೆಯ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × one =
Remember me
