ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ಸಾಕಷ್ಟು ಕುರುಹುಗಳು ಸಿಕ್ಕಿವೆ. ಸಿ.ಸಿ.ಟಿವಿಯಲ್ಲಿ ಕೆಲವು ಸಾಕ್ಷ್ಯಗಳು ಸಿಕ್ಕಿವೆ. ಆಳವಾಗಿ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಆ ವೇಳೆ ಸುಮಾರು 28 ಬಸ್ ಓಡಾಡಿವೆ. ಆತ ಬಸ್‌ನಲ್ಲಿ ಓಡಾಡಿರುವ ಸಾಧ್ಯತೆ ಇದೆ. ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇದ್ದು, ಪರಿಶೀಲನೆ ನಡೆಯುತ್ತಿದೆ ಎಂದರು.
ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನ ಮಾಡಿದರೂ ಬಿಡುವುದಿಲ್ಲ. ಯಾವ ಸಂಘಟನೆ ಮಾಡಿದೆ ಎಂದು ಈಗಲೇ ಹೇಳಲು ಬರುವುದಿಲ್ಲ. ಹೋಟೆಲ್‌ನವರು ಸಕ್ಸಸ್ ಆಗಿದ್ದಕ್ಕೆ ಹೊಟ್ಟೆಹುರಿಯಿಂದ ಮಾಡಿರಬಹುದು. ಅದೆಲ್ಲದರ ಬಗ್ಗೆಯೂ ತನಿಖೆ ಆಗುತ್ತಿದೆ ಎಂದು ಹೇಳಿದರು.
ವಿಪಕ್ಷಗಳಿಂದ ರಾಜೀನಾಮೆಗೆ ಆಗ್ರಹ ಕುರಿತ ಪ್ರಶ್ನೆಗೆ, ಬಿಜೆಪಿಯವರು ರಾಜೀನಾಮೆ ಕೇಳುತ್ತಲೇ ಇರುತ್ತಾರೆ. 2022ರಲ್ಲಿ ಕುಕ್ಕರ್ ಬ್ಲಾಸ್ಟ್ ಆದಾಗ ಇವರು ರಾಜೀನಾಮೆ ಕೊಟ್ಟಿದ್ರಾ? ಎಂದು ತಿರುಗೇಟು ನೀಡಿದರು.
ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಅಭ್ಯಾಸ ಆಗಿಬಿಟ್ಟಿದೆ. ಸಿ.ಎಂ, ಗೃಹ ಸಚಿವರು ರಾಜೀನಾಮೆ ಕೊಡಿ ಎನ್ನುತ್ತಾರೆ. ನಮಗೆ ಜವಬ್ದಾರಿ ಇದೆ? ಇದು ರಾಜ್ಯದ, ಬೆಂಗಳೂರಿನ ಸುರಕ್ಷತೆಯ ಪ್ರಶ್ನೆ. ನಮ್ಮಲ್ಲಿ ಸಮರ್ಥ ಪೊಲೀಸರಿದ್ದಾರೆ. ಎಲ್ ರೀತಿಯಲ್ಲೂ ಮಾಹಿತಿ ಸಂಗ್ರಹಿಸಿದ್ದಾರೆ. ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸದೇ ಬಿಡುವುದಿಲ್ಲ ಎಂದು ಡಾ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − three =
Remember me
