ಬೆಂಗಳೂರು:ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ ಜನರಿಗೆ ರಕ್ಷಣೆ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಬೇಕು. ಇಂಥ ಪ್ರಕರಣ ಮರುಕಳಿಸದಂತೆ ಎಚ್ಚರವಹಿಸಬೇಕು ಎಂದರು.
ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ತಿಳಿಸಿದರು.
ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದರು.
ಗೃಹ ಸಚಿವ ಜಿ.ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜ್, ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ.ದಯಾನಂದ್ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 5 =
Remember me
