
ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯೂಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಬಾಗಲಕೋಟೆಯ ರಾಮ ಮನಗೂಳಿ, ಮಂಗಳೂರಿನ ಕೆ.ಮನೋಹರ ಪ್ರಸಾದ್ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿತು.ಕೆಯೂಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಬಾಗಲಕೋಟೆಯ ರಾಮ ಮನಗೂಳಿ ಅವರು ರಾಜ್ಯ ಸಂಘದ ಉಪಾಧ್ಯಕ್ಷರಾಗಿ, ಜಿಲ್ಲಾ ಸಂಘದ ಅಧ್ಯಕ್ಷರಾಗಿ ಸಲ್ಲಿಸಿದ್ದ ಸೇವೆ ಅನನ್ಯ. ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಸಂಘಟನೆ ಮಾಡಿ ಸೈ ಎನ್ನಿಸಿಕೊಂಡಿದ್ದ ಹೆಗ್ಗಳಿಕೆ ಅವರದು ಎಂದರು.ಸಂಯುಕ್ತ ಕರ್ನಾಟಕ ಬ್ಯೂರೊ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ ಅವರ ಗರಡಿಯಲ್ಲಿ ಹಲವು ಪತ್ರಕರ್ತರು ಬೆಳೆದಿರುವುದನ್ನು ಶ್ಲಾಸಿದರು.ಮಂಗಳೂರಿನ ವಿ.ಮನೋಹರ ಪ್ರಸಾದ್ ಅವರು ಸಂಘದ ಪ್ರತಿಯೊಂದು ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿದವರು. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ, ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿಯೂ ಭಾಗವಹಿಸಿದ್ದು ಅವರ ಕ್ರೀಯಾಶೀಲತೆಗೆ ಸಾಕ್ಷಿ. ಸುದ್ದಿಮನೆಯಲ್ಲಿ ಹಿರಿಯಣ್ಣನಾಗಿದ್ದ ಅವರ ವೃತ್ತಿ ಬದ್ಧತೆಯನ್ನು ನೆನೆದರು.ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ್ ಮಾತನಾಡಿ, ರಾಮ ಮನಗೂಳಿ, ಮನೋಹರ್ ಪ್ರಸಾದ್ ಮತ್ತು ದಿಲೀಪ್ ಜೋಷಿಯವರು ನಮ್ಮನ್ನು ಬಿಟ್ಟು ಅಗಲಿರುವುದು ನಿಜಕ್ಕೂ ನೋವಿನ ಸಂಗತಿ. ಮೂವರು ಕನ್ನಡ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆ ಅಪಾರ. ಮೂವರ ಆತ್ಮಕ್ಕೂ ಭಗವಂತ ಚಿರಶಾಂತಿ ನೀಡಲಿ ಎಂದರು.ಸಂಯುಕ್ತ ಕರ್ನಾಟಕ ಪತ್ರಿಕೆಯ ಸಹಾಯಕ ಸಂಪಾದಕ ಕೆ.ವಿ. ಪರಮೇಶ್ ಮಾತನಾಡಿ,ರಾಮ ಮನಗೂಳಿಯವರು ತಮ್ಮ ವೃತ್ತಿ ಜೀವನದಲ್ಲಿ ’ಸಂಯುಕ್ತ ಕರ್ನಾಟಕ’ ಪತ್ರಿಕೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ನಿಜಕ್ಕೂ ನೋವಿನ ಸಂಗತಿ ಎಂದರು.ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್ ಮಾತನಾಡಿ, ಮಂಗಳೂರಿನ ಮನೋಹರ್ ಪ್ರಸಾದ್ ಪತ್ರಿಕೋದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿದವರು. ಹಲವಾರು ವಿಶೇಷ ವರದಿಗಳ ಮೂಲಕ ’ಉದಯವಾಣಿ’ ಪತ್ರಿಕೆಗೆ ಭದ್ರ ನೆಲೆ ಒದಗಿಸಿದವರು. ಅವರ ಮಾರ್ಗದರ್ಶನವು ಕರಾವಳಿಯ ಹೆಚ್ಚಿನ ಪತ್ರಕರ್ತರಿಗೆ ಸಿಕ್ಕಿರುವುದು ನಿಜಕ್ಕೂ ಮರೆಯಲಾರದ ವಿಷಯ ಎಂದರು.ಬೀದರ್ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಹಿರಿಯ ಪತ್ರಕರ್ತೆ ಶಶಿಕಲಾ ಮಾತನಾಡಿ, ಹಿರಿಯ ಪತ್ರಕರ್ತರ ಅಗಲಿಕೆ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ ಎಂದರು. ಕಾಸರಗೋಡು ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ರೋಶನಿ ಗೌಡ ಸೇರಿದಂತೆ ಹಲವರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಗದಗದ ದಿಲೀಪ್ ಕುಮಾರ್ ಜೋಷಿ ಮತ್ತು ಪತ್ರಿಕಾ ಪ್ರಸರಣಾಧಿಕಾರಿ ಕೊಪ್ಪಳದ ಮಂಜುನಾಥ ದಂಡಿನ ಅವರ ನಿಧನಕ್ಕೂ ಸಂತಾಪ ವ್ಯಕ್ತಪಡಿಸಲಾಯಿತು.ಕಾರ್ಯಕ್ರಮದಲ್ಲಿ ರಾಜ್ಯ ಪತ್ರಿಕಾ ವಿತರಕರ ಸಂಘದ ಕೆ.ಶಂಭುಲಿಂಗ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ದೇವರಾಜು, ಬೆಂಗಳೂರು ನಗರ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಎಂ ಜಿಕ್ರಿಯಾ, ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ್, ಕೆ.ಎಸ್. ಸ್ವಾಮಿ ಸೇರಿದಂತೆ ಸಂಘದ ಹಲವಾರು ಹಿರಿಯ-ಕಿರಿಯ ಪತ್ರಕರ್ತರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
