ರಾಮನಗರ:ಅತೀ ವೇಗದಲ್ಲಿ ಕಾರು ಚಲಾಯಿಸಿಕೊಂಡು ಬಂದ ಚಾಲಕನೊಬ್ಬ, ಕಾರನ್ನು ಸರ್ವಿಸ್​​ ರಸ್ತೆಗೆ ಬದಲಾಯಿಸುವಲ್ಲಿ ಎಡವಿದ್ದು, ನೇರವಾಗಿ ಸಂಕಲಗೆರೆ ಗೇಟ್ ಮೊಸರ್ ಕಟ್ಟೆ ಸಮೀಪದಲ್ಲಿದ್ದ ಕೆರೆಗೆ ಹಾರಿಸಿದ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದೆ.
ಇದನ್ನೂ ಓದಿ:ರಾಜರ್ಷಿ ನಾಲ್ವಡಿ ಸಾಧನೆ ಅನನ್ಯ: ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ನ ನಿರ್ದೇಶಕ ಡಾ.ನಾಗರಾಜು ಭೈರಿ ಬಣ್ಣನೆ
ಫಿಲ್ಮಿ ಸ್ಟೈಲ್​ನಲ್ಲಿ ಕೆರೆಗೆ ಬಿದ್ದ ಕಾರನ್ನು ಕಂಡ ಸ್ಥಳೀಯರು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆ ವೇಳೆ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತಕ್ಕೀಡಾದ ಸ್ಕೋಡಾ ಕಾರು ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ.
ಬೈರಾಪಟ್ಟಣದ ಸಂಕಲಗೆರೆ ಗೇಟ್ ಬಳಿ ಇರುವ ಮೊಸರು ಕಟ್ಟೆಗೆ ಹೆದ್ದಾರಿಯಿಂದ‌ ಸರ್ವಿಸ್ ರಸ್ತೆಗೆ ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಪಕ್ಕದ ಕೆರೆಗೆ ಹಾರಿಬಿದ್ದ ಕಾರಿನ ದೃಶ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಓವರ್ ಸ್ಪೀಡ್​ನಲ್ಲೇ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ತಿರುಗಿಸುವ ವೇಳೆ ಕಾರು ಕೆರೆಗೆ ಬಿದ್ದಿದೆ. ಸದ್ಯ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಡಕ್​ಔಟ್​ ಆಗಿದ್ದಕ್ಕೆ ಹಿಗ್ಗಾಮುಗ್ಗಾ ಟ್ರೋಲ್​ ಮಾಡ್ತೀರಾ! ಇವರ ಅಸಲಿ ಬ್ಯಾಟಿಂಗ್ ನೋಡಿದ್ರೆ ಕಳೆದೋಗ್ತಿರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 1 =
Remember me
