ಬೆಂಗಳೂರು:ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು.
ಎಕ್ಸ್​ ಖಾತೆಯಲ್ಲಿ ಈ ವಿಚಾರವಾಗಿ ಸರಣಿ ಪೋಸ್ಟ್​ ಮಾಡಿರುವ ಡಿಸಿಎಂ ಡಿಕೆಶಿ, ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು.
ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.
ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ.
ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ.
ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ.
ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು…
— DK Shivakumar (@DKShivakumar)October 25, 2023

ಅರವಿಂದ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕಾರ

ಕಿಡ್ನಿ ಫೇಲ್ಯೂರ್​ ಬೆನ್ನಲ್ಲೇ ಹಾರ್ಟ್​ ಅಟ್ಯಾಕ್​! ಯುವಕನ ಸಾವು, ಹೆಲ್ತ್​ ಬುಲೆಟಿನ್​ನಲ್ಲಿ ಭಯಾನಕ ಸಂಗತಿ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eleven =
Remember me
