ramya legal action: Hostel hudugaru bekagiddare film team is in tensionಬೆಂಗಳೂರು: ನಟಿ ರಮ್ಯಾ ಕೋಪದಿಂದಾಗಿ ಹಾಸ್ಟೆಲ್ ಹುಡುಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರ್ಥಾತ್, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರತಂಡ ನಟಿ ರಮ್ಯಾ ಕೈಗೊಂಡ ಕಾನೂನುಕ್ರಮದಿಂದಾಗಿ ಚಿಂತೆಗೀಡಾಗಿದ್ದಾರೆ. ಮಾತ್ರವಲ್ಲ, ಮುಂದೇನು ಎಂದು ತೋಚದ ಚಿತ್ರತಂಡ ಈಗ ನ್ಯಾಯಾಧೀಶರ ಬಳಿಗೆ ತೆರಳಿದೆ.
ಇದನ್ನೂ ಓದಿ:ವೇದಗಳನ್ನು ಓದಿದವರು ದೊಡ್ಡವರಲ್ಲ, ವೇದನೆಯನ್ನು ಅರಿತವರು ದೊಡ್ಡವರು: ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್
ಚಿತ್ರದ ಪ್ರೋಮೋಗೆ ಎಂದು ತಮ್ಮನ್ನು ಚಿತ್ರೀಕರಿಸಿಕೊಂಡಿದ್ದ ದೃಶ್ಯಗಳನ್ನು ಸಿನಿಮಾದಲ್ಲೂ ಬಳಸಿಕೊಳ್ಳಲಾಗಿದೆ ಎಂದು ಕೋಪಗೊಂಡಿರುವ ನಟಿ ರಮ್ಯಾ, ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಜಾರಿ ಮಾಡಿ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರತಂಡಕ್ಕೆ ಶಾಕ್​ ಕೊಟ್ಟ ರಮ್ಯಾ: 1 ಕೋಟಿ ರೂ. ಪರಿಹಾರಕ್ಕೆ ಒತ್ತಾಯ
ಇನ್ನೇನು ಸಿನಿಮಾ ಬಿಡುಗಡೆ ಮಾಡಬೇಕು ಎಂದುಕೊಂಡಿರುವಾಗ ಹೀಗಾಗಿರುವುದರಿಂದ ಚಿತ್ರತಂಡ ಸಂಕಷ್ಟಕ್ಕೆ ಒಳಗಾಗಿದೆ. ಹೀಗಾಗಿ ನಿರ್ಮಾಪಕ ವರುಣ್ ಗೌಡ ಹಾಗೂ ಚಿತ್ರತಂಡ ನ್ಯಾಯಾಧೀಶರ ಬಳಿಗೆ ತೆರಳಿದೆ. ಸಿನಿಮಾ ಬಿಡುಗಡೆ ಮಾಡಬೇಕೋ ಬೇಡವೋ ಎಂದು ಅವರ ಬಳಿ ಸಲಹೆ ಕೇಳಿ, ಬಳಿಕ ಅದರಂತೆ ಚಿತ್ರತಂಡ ನಡೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಜಡ್ಜ್ ಭೇಟಿ ಬಳಿಕ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಳ್ಳಲಿದೆ ಎಂದೂ ಹೇಳಲಾಗಿದೆ.
ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್

ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × five =
Remember me
