ಚಿಕ್ಕಮಗಳೂರು:ಕಾರು ಹಾಗೂ ಟೆಂಪೋ ಟ್ರಾವೆಲರ್​(TT) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನಲ್ಲಿ ನಡೆದಿದೆ.
ಕಡುರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಮತ್ತಘಟ್ಟ ಬಳಿ ಘಟನೆ ನಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ಟಿಟಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಮೃತ ದುರ್ದೈವಿಗಳನ್ನು ಮಯಾಂಕ್​(3) ಹಾಗೂ ಗಿರಿಧರ್(46) ಎಂದು ಗುರುತಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಗಿರಿಧರ್ ಕುಟುಂಬ ಸಮೇತರಾಗಿ ಸಂಬಂಧಿಕರೊಬ್ಬರ ಮದುವೆಗೆಂದು ತೆರಳುತ್ತಿದ್ದರು.
ಇದನ್ನೂ ಓದಿ:ಅನ್ಯ ಜಾತಿಯ ಯುವಕನ ಜೊತೆ ಮದುವೆ; ನವದಂಪತಿಯನ್ನು ಹತ್ಯೆ ಮಾಡಿದ ಕುಟುಂಬಸ್ಥರು
ಈ ವೇಳೆ ಚಿಕ್ಕಮಗಳೂರಿನಿಂದ ಕೇರಳ ಕಡೆ ಹೊರಟ್ಟಿದ್ದ ಟಿಟಿ ಹಾಗೂ ಕಾರ್​ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಗಿರಿಧರ್​, ಮಯಾಂಕ್​ ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರ್​ ಹಾಗೂ ಟಿಟಿ ನಡುವಿನ ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನಗಳು ಪಲ್ಟಿ ಹೊಡೆದಿದ್ದು ಕೇರಳ ಪ್ರವಾಸಕ್ಕೆ ಟೆಂಪೋ ಟ್ರಾವೆಲರ್ನಲ್ಲಿ ತೆರಳುತ್ತಿದ್ದ 7 ಮಂದಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + five =
Remember me
