ತುಮಕೂರು: ವ್ಯಕ್ತಿಯೊಬ್ಬ ಹಾಡಹಗಲೇ ಏಳು ವರ್ಷದ ಬಾಲಕಿಯೊಬ್ಬಳನ್ನು ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸುತ್ತಿದ್ದಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನನ್ನು ರೆಡ್ ಹ್ಯಾಂಡೆಡ್ ಆಗಿ ಹಿಡಿದ ಜನರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ತುಮಕೂರಿನ ಶಾಂತಿನಗರದ ಗೂಡ್​​ಶೆಡ್ ಕಾಲನಿ ನಿವಾಸಿ ಷಫಿ ಎಂಬಾತನೇ ಆರೋಪಿ. ವೃತ್ತಿಯಿಂದ ಆಟೋಚಾಲಕನಾಗಿರುವ ಈತ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಸ್​ ನಿಲ್ದಾಣ ಬಳಿ ಓಡಾಡುತ್ತಿದ್ದ 7 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಟೋಗೆ ಹತ್ತಿಸಿಕೊಂಡಿದ್ದಾನೆ.
ಇದನ್ನೂ ಓದಿ:#NoBindiNoBusiness | ಹಿಂದೂಗಳಿಂದ ಮತ್ತೆ ಅಭಿಯಾನ, ಟ್ರೆಂಡ್ ಆಯ್ತು ಕ್ಯಾಂಪೇನ್..
ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆರೋಪಿಯನ್ನು ರೆಡ್ ಹ್ಯಾಂಡೆಡ್ ಆಗಿ ಹಿಡಿದ ಸಾರ್ವಜನಿಕರು, ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಕೇಸು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮತ್ತು ಆತನ ಆಟೋ ವಶಕ್ಕೆ ಪಡೆದಿದ್ದಾರೆ.
ಅಪ್ರಾಪ್ತ ವಯಸ್ಸಿನ ಈ ಬಾಲಕಿ ಅನಾಥೆಯಾಗಿದ್ದು, ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದಳು. ಅತ್ಯಾಚಾರ ಯತ್ನದಿಂದ ರಕ್ಷಿಸಲಾದ ಬಾಲಕಿಯನ್ನು ತುಮಕೂರಿನ ಬಾಲಮಂದಿರಕ್ಕೆ ಕರೆದೊಯ್ದು ಬಿಡಲಾಗಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಅನಾಥ ಬಾಲಕಿಯ ಮಾನ ಉಳಿದಿದೆ.
ಪೆಟ್ರೋಲ್ ಬಂಕ್​ಗಳಲ್ಲಿನ ಮೋಸ ತಪ್ಪಿಸಲು ಸರ್ಕಾರಕ್ಕೆ ಹೊಸ ಬೇಡಿಕೆ: ವಿಡಿಯೋ ವೈರಲ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
