ಬೆಂಗಳೂರು:ಫೇಸ್​ಬುಕ್​ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಪ್ರೀತಿಸುವ ಸೋಗಿನಲ್ಲಿ 31 ವರ್ಷದ ಮಹಿಳೆಯನ್ನು ಪಾರ್ಟಿಗೆಂದು ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬನಶಂಕರಿಯ ಶ್ರೀನಿವಾಸ ನಗರದ ಮಹಿಳೆ ಕೊಟ್ಟ ದೂರಿನ ಮೇರೆಗೆ ವಾಸಿಂ ಪಾಷಾ (31) ಎಂಬಾತನ ವಿರುದ್ಧ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಂತ್ರಸ್ತೆಗೆ 2011ರಲ್ಲಿ ಫೇಸ್​ಬುಕ್​ನಲ್ಲಿ ವಾಸಿಂ ಪರಿಚಯವಾಗಿದ್ದ. ಪ್ರತಿದಿನ ಚಾಟಿಂಗ್ ಮಾಡುತ್ತಿದ್ದರು. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಸ್ನೇಹಿತರ ಮನೆಯಲ್ಲಿ ಆಯೋಜಿಸಿದ್ದ ಪಾರ್ಟಿಗೆ ಕರೆದೊಯ್ದು, ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿದ್ದ. ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದಾಗ ಅತ್ಯಾಚಾರ ಎಸಗಿದ್ದಾನೆ.
ಪ್ರಶ್ನಿಸಿದಾಗ ಮದುವೆಯಾಗುವುದಾಗಿ ಭರವಸೆ ನೀಡಿದ. ಇದಾದ ಬಳಿಕವೂ ಲಾಡ್ಜ್ ಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಖರ್ಚಿಗೆ ಹಣವಿಲ್ಲವೆಂದು 30 ಸಾವಿರ ರೂ. ಪಡೆದಿದ್ದ. ಇತ್ತೀಚೆಗೆ ಮದುವೆ ವಿಷಯ ಪ್ರಸ್ತಾಪಿಸಿದ್ದಕ್ಕೆ ಹಲ್ಲೆ ನಡೆಸಿದ್ದಲ್ಲದೆ ಧರ್ಮ ಬಿಟ್ಟು ಮದುವೆಯಾಗುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.
ಗಂಟಲದ್ರವದ ಬದಲು ಯುವತಿಯ ಯೋನಿದ್ರವ ಪಡೆದ ಲ್ಯಾಬ್‌ ಭೂಪ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + three =
Remember me
