ಮಂಗಳೂರು:ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದಾನೆ ಎಂದು ಆರೋಪಿಸಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್​ ಕಾನ್​ಸ್ಟೇಬಲ್​ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿ ಸಾಯಬಣ್ಣ ವಿರುದ್ಧ ಅತ್ಯಾಚಾರ ಆರೋಪ ದೂರು ದಾಖಲಾಗಿದೆ. ಫೇಸ್​ಬುಕ್​ ಮೂಲಕ ಪರಿಚಯವಾದ ಸಾಯಬಣ್ಣ, ಮೇ 20ರಂದು ಮದುವೆ ಮಾತುಕತೆಗೆಂದು ಬೆಂಗಳೂರಿಗೆ ಬಂದಿದ್ದ. ಆ ದಿನ ಅಲ್ಲೇ ಉಳಿದು ಅತ್ಯಾಚಾರ ಎಸಗಿದ್ದಾನೆ. ಜೂನ್​ 12ರಂದು ಮಂಗಳೂರಿನ ಕ್ವಾಟ್ರಸ್​ಗೆ ಕರೆಸಿ ಅತ್ಯಾಚಾರ ಎಸಗಿದ್ದಾನೆ. ಮದುವೆಯಾಗುವಂತೆ ಒತ್ತಾಯಿಸಿದಾಗ ಆತ ನಿರಾಕರಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.ಇದನ್ನೂ ಓದಿರಿಪೊಲೀಸರ ದಾಳಿ ವೇಳೆ ಆ ಪುರುಷರ ಕೈಯಲ್ಲಿದ್ದ ಲೇಡಿಸ್​ ಪರ್ಸ್​ನ ರಹಸ್ಯ ಬಯಲಾಯ್ತು!
ಸಾಯಬಣ್ಣನ ಜತೆ ಸೇರಿ ಬೆಂಗಳೂರಿನ ರಮೇಶ್​ ಗೌಡ ಎಂಬಾತ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾಳೆ. ನ್ಯಾಯಕ್ಕಾಗಿ ಸಂತ್ರಸ್ತೆ ಮಹಿಳಾ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು, ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
ಡ್ರಗ್ಸ್​ ಮಾಫಿಯಾ; ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ಬುಲಾವ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 + five =
Remember me
