ಶಿವಮೊಗ್ಗ:ಹಾಸನ ಲೋಕಸಭೆ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚರ ಎಸಗಿದ್ದು ಅವರ ಪರ ಮತಯಾಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಒತ್ತಾಯಿಸಿದರು.
ಇದನ್ನೂ ಓದಿ:ಕಾಂಗ್ರೆಸ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಗುರುವಾರ ಏರ್ಪಡಿಸಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ವಜ್ವಲ್ ಪರ ಮತಯಾಚನೆ ನಡೆಸಿದ್ದು ದೇಶದ ಮಹಿಳೆಯರಲ್ಲಿ ಮೋದಿ ಅವರು ಕ್ಷಮೆಯಾಚಿಸಬೇಕು ಆಗ್ರಹಿಸಿದರು.
ಪ್ರಜ್ವಲ್ ರೇವಣ್ಣ ಅವರದ್ದು ಲೈಂಗಿಕ ಹಗರಣವಲ್ಲ. ಅವರು ಮಾಡಿರುವುದು ಸಾಮೂಹಿಕ ಅತ್ಯಾಚಾರ. 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅವರೊಬ್ಬ ಮಾಸ್ ರೇಪಿಸ್ಟ್. ಪ್ರಜ್ವಲ್ ಮಹಿಳೆಯ ಮೇಲೆ ಹೀನ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದಿದ್ದರೂ ಪ್ರಧಾನಿ ನರೇಂದ್ರ ಮೋದಿ ಪ್ರಜ್ವಲ್ ಪರವಾಗಿ ಮತಯಾಚಿಸಿದ್ದಾರೆ. ಪ್ರಜ್ವಲ್‌ಗೆ ಮತ ನೀಡುವ ಮೂಲಕ ನನಗೆ ಸಹಾಯ ಮಾಡಿ ಎಂದು ಸಾರ್ವಜನಿಕ ಸಮಾವೇಶದಲ್ಲಿ ಹೇಳಿದ್ದಾರೆ. ಇದರಿಂದ ಪ್ರಧಾನಿ ಮೋದಿ ಮಹಿಳೆಯರ ಕ್ಷಮೆ ಕೋರಬೇಕು ಎಂದು ಹೇಳಿದರು.
ಕೇವಲ ಮೋದಿ ಮಾತ್ರವಲ್ಲ. ಪ್ರಜ್ವಲ್ ಮಾಡಿರುವ ಕುಕೃತ್ಯದ ಬಗ್ಗೆ ಬಿಜೆಪಿಯ ಹಲವು ನಾಯಕರಿಗೆ ಮೊದಲೇ ಮಾಹಿತಿಯಿತ್ತು. ಆದರೂ ಅಧಿಕಾರ ಪಡೆಯುವುದಕ್ಕಾಗಿ ಏನು ಬೇಕಾದರೂ ಮಾಡಬಹುದು ಎಂದು ಭಾವಿಸಿರುವ ಬಿಜೆಪಿಯವರು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಂಡರು ಎಂದು ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದರು.
ಸಿಬಿಐ, ಗುಪ್ತಚರ ಸೇರಿದಂತೆ ಮಹತ್ವದ ಏಜೆನ್ಸಿಗಳೆಲ್ಲವೂ ಪ್ರಧಾನಿ ಕೈ4ಯಲ್ಲೇ ಇದೆ. ಅವರಿಗೆ ಎಲ್ಲ ಮಾಹಿತಿಯೂ ಇರುತ್ತದೆ. ಆದರೂ ಪ್ರಜ್ವಲ್ ದೇಶ ಬಿಟ್ಟು ಹೋಗಲು ಅವಕಾಶ ನೀಡಲಾಯಿತು. ಇದಕ್ಕಾಗಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ದೇಶದ ಜನರಿಗೆ ಕೈ ಮುಗಿದು ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
‘ಮೋದಿ ರಾಜಕೀಯ ಅಂತ್ಯ ಕಾಲವಿದು’: ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
