ಉಡುಪಿ:ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ ಅಚ್ಚರಿಗೆ ಕಾರಣವಾಗಿದೆ.
ಮೀನು ಹಿಡಿಯಲು ತೆರಳಿದ್ದ ಸೀ ಕ್ಯಾಪ್ಟನ್ ಎಂಬ ಲೈಲ್ಯಾಂಡ್ ಬೋಟಿನವರು ಬೀಸಿದ ಬಲೆಯಲ್ಲಿ ಭಾರಿ ಗಾತ್ರದ ಮೀನು ಸಿಲುಕಿದೆ. ಮಲ್ಪೆ ಬಂದರಿಗೆ ಬಂದು ಬೋಟಿನ ಮೀನುಗಳನ್ನು ಇಳಿಸುವ ವೇಳೆ ಬಲೆಯೊಳಗೆ ಬೃಹತ್ ಗಾತ್ರದ ಮೀನು ಪತ್ತೆಯಾಗಿದೆ.
ಸ್ಥಳೀಯ ಭಾಷೆಯಲ್ಲಿ ಗರಗಸ ಮೀನು ಎಂದು ಕರೆಯಲಾಗುವ ಈ ಮೀನಿಗೆ ಗರಗಸ ಶಾರ್ಕ್ ಎಂದೂ ಹೇಳುತ್ತಾರೆ. ಹತ್ತು ಅಡಿಗೂ ಅಧಿಕ ಉದ್ದವಿರುವ ಮೀನಿನ ಬಾಯಿಂದ ಗರಗಸ ಮಾದರಿಯ ಮೊನಚಾದ ಹಲ್ಲುಗಳು ಹೊರ ಬಂದಿವೆ. ಕ್ರೇನ್ ಮೂಲಕ ಎತ್ತಿ, ಸದ್ಯ ಈ ಮೀನನ್ನು ವಿಲೇವಾರಿ ಮಾಡಲಾಗಿದೆ. ಅಪಾಯದ ಅಂಚಿನಲ್ಲಿರುವ ಈ ಮೀನನ್ನು, ವನ್ಯಜೀವಿ ಸಂರಕ್ಷಣಾ ಕಾಯ್ದೆ ನಿಯಮಗಳ ಅನುಸಾರ ಅನುಬಂಧ ೧ ರಲ್ಲಿ ಗುರುತಿಸಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
ಅಪ್ಪು ಕೊನೆ ಚಿತ್ರಕ್ಕೆ ಭಾರಿ ಬೇಡಿಕೆ; ದಾಖಲೆ ಸೃಷ್ಟಿಸುವ ಮುನ್ಸೂಚನೆ ನೀಡಿದ ‘ಜೇಮ್ಸ್’!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten + ten =
Remember me
