ಬೆಂಗಳೂರು:ಮಹಾಮಾರಿ ಕರೊನಾದಿಂದಾಗಿ ರಕ್ತದಾನ ಶಿಬಿರಗಳು ನಡೆಯದಿರುವ ಹಿನ್ನೆಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್ ರಕ್ತನಿಧಿಯಲ್ಲಿ ರಕ್ತದ ಕೊರತೆ ಎದುರಾಗಿದೆ. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಹೆಚ್ಚು ಬೇಡಿಕೆ ಬರಲಾರಂಭಿಸಿದೆ.
ದೇಹದಲ್ಲಿ ಗುಣಮಟ್ಟದ ರಕ್ತ ಉತ್ಪತ್ತಿಯಾಗದಿರುವ ತಲಸ್ಸೆಮಿಯಾ ರೋಗದಿಂದ ಬಳಲುತ್ತಿರುವ ಮಕ್ಕಳಿಗೆ 15 ದಿನಗಳಿಗೊಮ್ಮೆ ರಕ್ತ ನೀಡಬೇಕಾದ ಅಗತ್ಯವಿರುತ್ತದೆ. ಇಂತಹ ಮಕ್ಕಳ ಆರೈಕೆಗಾಗಿ ಪರಿಷತ್‌ನಿಂದ ‘ಸಂರಕ್ಷಾ’ ಆರೈಕೆ ಕೇಂದ್ರವು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಆರೈಕೆ ಕೇಂದ್ರದಲ್ಲಿ ಇದೀಗ 500ಕ್ಕೂ ಹೆಚ್ಚು ಮಕ್ಕಳು ಉಚಿತವಾಗಿ ಆರೈಕೆ ಪಡೆಯುತ್ತಿದ್ದು, ಕರೊನಾದಿಂದಾಗಿ ರಕ್ತ ಪೂರೈಸುವುದು ಕಷ್ಟವಾಗುತ್ತಿದೆ. ಆದ್ದರಿಂದ, ಸಾರ್ವಜನಿಕರು ಖುದ್ದಾಗಿ ಪರಿಷತ್‌ನ ರಕ್ತ ಕೇಂದ್ರಕ್ಕೆ ಆಗಮಿಸಿ ರಕ್ತದಾನ ಮಾಡುವಂತೆ ಹಾಗೂ ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಗಳು ರಕ್ತದಾನ ಶಿಬಿರಗಳನ್ನು ಆಯೋಜಿಸುವಂತೆ ಪರಿಷತ್ ಮನವಿ ಮಾಡಿದೆ. ವಿವರಕ್ಕಾಗಿ ದೂ:080-26608870, 29747870ಕ್ಕೆ ಸಂಪರ್ಕಿಸಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − six =
Remember me
