ಬೆಂಗಳೂರು:ಹೊಸ ಬಿಪಿಎಲ್​, ಎಪಿಎಲ್​ ಕೋರಿ ಆಹಾರ ಇಲಾಖೆಗೆ ಸಲ್ಲಿಸಿರುವ ಅರ್ಜಿಗಳ ವಿಲೇವಾರಿಗೆ ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಅನುಮತಿ ಸಿಗುವ ಸಾಧ್ಯತೆ ಇದೆ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೆ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಿದ್ದಾರೆ.
ಮಾರ್ಚ್​ ಅಥವಾ ಏಪ್ರಿಲ್​ನಲ್ಲಿ ಅರ್ಜಿಗಳ ವಿಲೇಗೆ ಅನುಮತಿ ನೀಡುವುದಾಗಿ ಆಹಾರ ಸಚಿವ ಕೆ.ಎಚ್​.ಮುನಿಯಪ್ಪ ಹಿಂದೊಮ್ಮೆ ಹೇಳಿದ್ದರು. ಇದೀಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಇದು ಮುಗಿದ ಬಳಿಕ ಸರ್ಕಾರ, ಅರ್ಜಿ ವಿಲೇಗೆ ಅನುಮತಿ ನೀಡಲಿದೆ.
ಹೊಸ ರೇಷನ್​ ಕಾರ್ಡ್​ ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳು ಬಾಕಿ ಉಳಿದಿವೆ. ಸರ್ಕಾರ ಅನುಮತಿ ಕೊಟ್ಟರೆ “ಅನರ್ಹರ ಪತ್ತೆ ಮೊದಲು; ಪಡಿತರ ಚೀಟಿ ವಿತರಣೆ ಆನಂತರ’ ಎಂಬ ಸೂತ್ರ ಅಳವಡಿಸಿಕೊಂಡು ಇಲಾಖೆ, ಅರ್ಜಿ ವಿಲೇವಾರಿ ಮಾಡಲಿದೆ. ರೇಷನ್​ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್​ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್​, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಸೆ.1ರಿಂದ 10ರವರೆಗೆ ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್​ ಹಾಗೂ ಕರ್ನಾಟಕ ಓನ್​ ಸೇರಿ ಇತರ ಕಡೆಗಳಲ್ಲಿ ರೇಷನ್​ ಕಾರ್ಡ್​ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದು. ಈಗ ಅದನ್ನು ಸ್ಥಗಿತಗೊಳಿಸಲಾಗಿದೆ.
ಸರ್ವಾಧಿಕಾರಿಯ ಮತ್ತೊಂದು ವಿಚಿತ್ರ ಆದೇಶ: ಉತ್ತರ ಕೊರಿಯಾದಲ್ಲಿ ರೆಡ್​ ಲಿಪ್​ಸ್ಟಿಕ್ ಬ್ಯಾನ್! ನಿಯಮ ಉಲ್ಲಂಘಿಸಿದರೆ…?ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಶೇ.76.04, ನಗರ ಪ್ರದೇಶಗಳಲ್ಲಿ ಶೇ.49.36 ಸೇರಿ ಒಟ್ಟು 3,58,87,666 ಫಲಾನುಭವಿಗಳಿಗೆ 1,03,70,669 ಬಿಪಿಎಲ್​ ಕಾರ್ಡ್​ ನೀಡಬೇಕೆಂಬ ನಿಯಮವಿದೆ. ಆದರೆ, ರಾಜ್ಯದಲ್ಲಿ ಸದ್ಯ 3,92,54,052 ಫಲಾನುಭವಿಗಳಿಗೆ 1,16,98,551 ರೇಷನ್​ ಕಾರ್ಡ್​ ನೀಡಲಾಗಿದೆ. ನಿಗದಿಗಿಂತ ಹೆಚ್ಚುವರಿಯಾಗಿ 13,27,882 ಬಿಪಿಎಲ್​ ಕೊಡಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 − 2 =
Remember me
